ಸರಕಾರಿ ಶಾಲೆಯಲ್ಲಿ ಮೂಲಭೂತ ಸೌಲಭ್ಯ ಕೊರತೆ: 4 ವಾರದಲ್ಲಿ ಪ್ರಗತಿ ವರದಿ ಸಲ್ಲಿಸಲು ಹೈಕೋರ್ಟ್ ನಿರ್ದೇಶನ

Update: 2019-07-15 17:17 GMT

ಬೆಂಗಳೂರು, ಜು.15: ರಾಜ್ಯದ ಸರಕಾರಿ ಶಾಲೆಗಳಲ್ಲಿ ಶಿಕ್ಷಕರು, ಸಿಬ್ಬಂದಿ ಹಾಗೂ ಮೂಲಭೂತ ಸೌಲಭ್ಯ ಕಲ್ಪಿಸಲು ನಿರ್ದೇಶಿಸಲು ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಂಬಂಧ ಹೈಕೋರ್ಟ್ ನಾಲ್ಕು ವಾರದಲ್ಲಿ ಪ್ರಗತಿ ವರದಿ ಸಲ್ಲಿಸಲು ರಾಜ್ಯ ಸರಕಾರಕ್ಕೆ ನಿರ್ದೇಶನ ನೀಡಿದೆ.

ಈ ಕುರಿತು ಭಾರತೀಯ ಭ್ರಷ್ಟಾಚಾರ ವಿರೋಧಿ ಪರಿಷತ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ್ ಅವರಿದ್ದ ವಿಭಾಗೀಯ ನ್ಯಾಯಪೀಠದಲ್ಲಿ ನಡೆಯಿತು. ಅರ್ಜಿದಾರರ ಪರ ವಾದಿಸಿದ ವಕೀಲರು, ರಾಜ್ಯದ ಸರಕಾರಿ ಶಾಲೆಗಳಲ್ಲಿ ಕಂಪ್ಯೂಟರ್ ಶಿಕ್ಷಕರ ಕೊರತೆ, ಶೌಚಾಲಯದ ಕೊರತೆ, ವಿದ್ಯಾರ್ಥಿಗಳು ಗಣಿತ ಸೇರಿ ಇನ್ನಿತರ ವಿಷಯಗಳ ಕಲಿಕೆಯಲ್ಲಿ ಹಿನ್ನೆಡೆ ಸೇರಿ ಇನ್ನಿತರ ಸಮಸ್ಯೆಗಳನ್ನು ಅನುಭವಿಸುತ್ತಿದ್ದಾರೆ. ಹೀಗಾಗಿ, ಈ ಎಲ್ಲ ಕೊರತೆಯನ್ನು ನೀಗಿಸಲು ರಾಜ್ಯ ಸರಕಾರಕ್ಕೆ ನಿರ್ದೇಶಿಸಬೇಕೆಂದು ಪೀಠಕ್ಕೆ ಮನವಿ ಮಾಡಿದರು. ನ್ಯಾಯಪೀಠವು ವಕೀಲರ ವಾದವನ್ನು ಆಲಿಸಿ ನಾಲ್ಕು ವಾರದಲ್ಲಿ ಪ್ರಗತಿ ವರದಿ ಸಲ್ಲಿಸಲು ರಾಜ್ಯ ಸರಕಾರಕ್ಕೆ ನಿರ್ದೇಶನ ನೀಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News