ವೆಸ್ಟ್‌ಇಂಡೀಸ್ ಪ್ರವಾಸಕ್ಕೆ ಜು.19ಕ್ಕೆ ಭಾರತ ತಂಡ ಆಯ್ಕೆ

Update: 2019-07-15 18:47 GMT

ಹೊಸದಿಲ್ಲಿ, ಜು.16: ಮುಂದಿನ ತಿಂಗಳು ವೆಸ್ಟ್‌ಇಂಡೀಸ್ ಪ್ರವಾಸ ಕೈಗೊಳ್ಳಲಿರುವ ಟೀಮ್ ಇಂಡಿಯಾವನ್ನು ಜು.19ಕ್ಕೆ ಆಯ್ಕೆ ಮಾಡಲಾಗುತ್ತದೆ. ಆಗಸ್ಟ್ 3 ರಿಂದ ಆರಂಭವಾಗಲಿರುವ ಸೀಮಿತ ಓವರ್ ಕ್ರಿಕೆಟ್‌ನಲ್ಲಿ ಮಹೇಂದ್ರ ಸಿಂಗ್ ಧೋನಿ ಅವರ ವೃತ್ತಿಭವಿಷ್ಯದ ಬಗ್ಗೆ ಸ್ಪಷ್ಟತೆ ಕಂಡುಬಂದಿಲ್ಲ.

ಜು.9 ರಂದು ಭಾರತ ತಂಡ ವಿಶ್ವಕಪ್‌ನಲ್ಲಿ ನ್ಯೂಝಿಲ್ಯಾಂಡ್ ವಿರುದ್ಧ ಸೋತ ನಂತರ ಧೋನಿಯ ವೃತ್ತಿಭವಿಷ್ಯದ ಕುರಿತ ಚರ್ಚೆ ಹೆಚ್ಚಾಗಿದೆ. 39ರ ಹರೆಯದ ಧೋನಿ ಮುಂದಿನ ಕೆಲವೇ ದಿನಗಳಲ್ಲಿ ನಿವೃತ್ತಿ ಪ್ರಕಟಿಸುವ ಸಾಧ್ಯತೆಯಿದೆ.

 ಱಱಆಯ್ಕೆ ಸಮಿತಿಯ ಸದಸ್ಯರು ಜು.19 ರಂದು ಮುಂಬೈನಲ್ಲಿ ಸಭೆ ಸೇರಲಿದ್ದಾರೆ. ಧೋನಿ ಬಗ್ಗೆ ನಮಗೇನೂ ಗೊತ್ತಿಲ್ಲ. ಅವರು ವಿಶ್ವಕಪ್‌ನಲ್ಲಿ ಚೆನ್ನಾಗಿ ಆಡಿದ್ದಾರೆ. ಕ್ರಿಕೆಟ್‌ನಲ್ಲಿ ಮುಂದುವರಿಯಬೇಕೇ, ಬೇಡವೇ ಎಂಬ ಕುರಿತು ಅವರೇ ನಿರ್ಧರಿಸಬೇಕಾಗಿದೆೞೞಎಂದು ಬಿಸಿಸಿಐ ಅಧಿಕಾರಿಯೊಬ್ಬರು ತಿಳಿಸಿದರು. ನಾಯಕ ವಿರಾಟ್ ಕೊಹ್ಲಿ ಹಾಗೂ ವೇಗದ ಬೌಲರ್ ಜಸ್‌ಪ್ರೀತ್ ಬುಮ್ರಾ ಟಿ-20 ಹಾಗೂ ಏಕದಿನ ಸರಣಿಯಿಂದ ವಿಶ್ರಾಂತಿ ಪಡೆಯುವ ಸಾಧ್ಯತೆಯಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News