ನಾಲ್ಕು ಅಂತಸ್ತಿನ ಕಟ್ಟಡ ಕುಸಿತ: ಇಬ್ಬರು ಮೃತ್ಯು

Update: 2019-07-16 08:45 GMT

ಮುಂಬೈ, ಜು.16: ಮುಂಬೈನ ಡೋಂಗ್ರಿಯಲ್ಲಿ ಮಂಗಳವಾರ ಬೆಳಗ್ಗೆ 11:40ಕ್ಕೆ ಬಹುಮಹಡಿಯ ಕಟ್ಟಡವೊಂದು  ಕುಸಿದು ಬಿದ್ದ ಪರಿಣಾಮವಾಗಿ  2 ಮಂದಿ ಮೃತಪಟ್ಟು 40ಕ್ಕೂ ಅಧಿಕ  ಮಂದಿ ಕಟ್ಟಡದ ಅವಶೇಷಗಳಡಿ ಸಿಲುಕಿಕೊಂಡಿರುವ ಘಟನೆ ವರದಿಯಾಗಿದೆ.  ನಾಲ್ವರು ಈ ವೇಳೆ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಗ್ನಿಶಾಮಕ ದಳ ಮತ್ತು ಎನ್ ಡಿಆರ್ ಎಫ್ ರಕ್ಷಣಾ ಕಾರ್ಯಾಚರಣೆಯಲ್ಲಿ ನಿರತವಾಗಿದ್ದು, ಈಗಾಗಲೇ 5 ಮಂದಿಯನ್ನು ರಕ್ಷಿಸಲಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News