ಡ್ರಗ್ಸ್ ಮಾಫಿಯಾ, ಅನಿಯಂತ್ರಿತೆ ಅಶ್ಲೀಲತೆ ವಿರುದ್ಧ ವುಮೆನ್ ಇಂಡಿಯಾ ಮೂವ್ಮೆಂಟ್ ಪ್ರತಿಭಟನೆ

Update: 2019-07-16 10:51 GMT

ಮಂಗಳೂರು, ಜು.16: ಮಾದಕ ದ್ರವ್ಯ ಮಾಪಿಯಾ, ಅನಿಯಂತ್ರಿತೆ ಅಶ್ಲೀಲ ತೆಯ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ವುಮೆನ್ ಇಂಡಿಯಾ ಮೂವ್ಮೆಂಟ್ ದ.ಕ. ಜಿಲ್ಲಾ ಸಮಿತಿಯ ವತಿಯಿಂದ ಜಿಲ್ಲಾಧಿಕಾರಿ ಕಚೇರಿಯ ಎದುರು ಇಂದು ಪ್ರತಿಭಟನಾ ಸಭೆ ನಡೆಯಿತು.

ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ಮಾತನಾಡಿದ ವುಮೆನ್ ಇಂಡಿಯಾ ಮೂವ್ ಮೆಂಟ್ ಇಂಡಿಯಾ ಅಧ್ಯಕ್ಷೆ ನಸ್ರಿಯಾ ಬೆಳ್ಳಾರೆ, ಬುದ್ಧಿವಂತರ ಜಿಲ್ಲೆಯಾದ ದಕ್ಷಿಣ ಕನ್ನಡದಲ್ಲಿ ಮಾದಕ ವ್ಯಸನಿಗಳ ಸಂಖ್ಯೆ ಹೆಚ್ಚುತ್ತಿದೆ. ಇದರಿಂದ ಕೊಲೆ, ದೌರ್ಜನ್ಯ, ಅತ್ಯಾಚಾರದಂತಹ ಪ್ರಕರಣಗಳು ಹೆಚ್ಚುತ್ತಿದ್ದು, ಇದು ಅಘಾತಕಾರಿ ಬೆಳವಣಿಗೆಯಾಗಿದೆ. ಇದರಿಂದ ಜಿಲ್ಲೆಯ ಹೆಣ್ಣುಮಕ್ಕಳ ಭವಿಷ್ಯ ಕ್ಕೆ ಅಪಾಯವಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಜಿಲ್ಲೆಯ ಪ್ರತಿಷ್ಠಿತ ಕಾಲೇಜು ಕ್ಯಾಂಪಸ್ ಗಳಲ್ಲಿ ವ್ಯವಸ್ಥಿತವಾಗಿ ಮಾದಕದ್ರವ್ಯ ಮಾರಾಟ ಮತ್ತು ಸೇವನೆ ಎಗ್ಗಿಲ್ಲದೆ ನಡೆಯುತ್ತಿದೆ. ಇದರಿಂದ ಅಶ್ಲೀಲತೆ ಅಪರಾಧ ಪ್ರಕರಣಗಳು ವಿದ್ಯಾರ್ಥಿಗಳ ಮೂಲಕವೂ ನಡೆಯುವಂತಾಗಿದೆ. ಈ ಬಗ್ಗೆ ಜಿಲ್ಲಾಡಳಿತ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ತಕ್ಷಣ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಮಾದಕ ದ್ರವ್ಯ ಜಾಲವನ್ನು ಪತ್ತೆ ಹಚ್ಚಲು ವಿಶೇಷ ಪೊಲೀಸ್ ತಂಡವನ್ನು ರಚಿಸಬೇಕು ಎಂದು ನಸ್ರಿಯಾ ಆಗ್ರಹಿಸಿದ್ದಾರೆ.

ಪ್ರತಿಭಟನಾ ಸಭೆಯಲ್ಲಿ ನ್ಯಾಷನಲ್ ವಿಮೆನ್ಸ್ ಫ್ರಂಟ್ ನ ರಾಷ್ಟ್ರೀಯ ಸಮಿತಿಯ ಸದಸ್ಯೆ ಫರ್ಝಾನ, ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾದ ರಾಷ್ಟ್ರೀಯ ಸಮಿತಿಯ ಸದಸ್ಯೆ ಮಿಸ್ರಿಯಾ, ವುಮೆನ್ ಇಂಡಿಯಾ ಮೂವ್ ಮೆಂಟ್ ನ ಜಿಲ್ಲಾ ಕಾರ್ಯದರ್ಶಿ ರುಬಿಯಾ  ಉಪಸ್ಥಿತರಿದ್ದರು.

Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News