ಬಿಜೆಪಿ ಶಾಸಕರಿಗೆ ವಿಪ್ ಜಾರಿ

Update: 2019-07-16 12:16 GMT

ಬೆಂಗಳೂರು, ಜು.16: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಜು.18ರಂದು ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚನೆ ಮಾಡುತ್ತಿರುವ ಹಿನ್ನೆಲೆಯಲ್ಲಿ, ವಿಶ್ವಾಸಮತದ ವಿರುದ್ಧ ಮತ ಚಲಾಯಿಸುವಂತೆ ಸೂಚಿಸಿ ಬಿಜೆಪಿ ತನ್ನ ಎಲ್ಲ ಶಾಸಕರಿಗೆ ವಿಪ್ ಜಾರಿ ಮಾಡಿದೆ.

ವಿಧಾನಸಭೆಯ ಪ್ರತಿಪಕ್ಷದ ಮುಖ್ಯ ಸಚೇತಕ ಸುನೀಲ್ ಕುಮಾರ್, ಬಿಜೆಪಿಯ ಎಲ್ಲ ಶಾಸಕರಿಗೆ ವಿಪ್ ಜಾರಿಗೊಳಿಸಿದ್ದು, ಮತದಾನದ ವೇಳೆ ಅಂದು ಸದನದಲ್ಲಿ ಕಡ್ಡಾಯವಾಗಿ ಹಾಜರಿರಬೇಕು ಮತ್ತು ವಿಶ್ವಾಸಮತದ ವಿರುದ್ಧ ಮತ ಚಲಾಯಿಸಬೇಕು ಎಂದು ವಿಪ್ ಜಾರಿ ಮಾಡಿದ್ದಾರೆ.

ಆಪರೇಷನ್ ಕಮಲದ ವಿರುದ್ಧ ಕಾಂಗ್ರೆಸ್ ಹಾಗೂ ಜೆಡಿಎಸ್ ರಿವರ್ಸ್ ಆಪರೇಷನ್ ಮಾಡಬಹುದು ಎಂಬ ಆತಂಕದಲ್ಲಿರುವ ಬಿಜೆಪಿ, ಸದನದಲ್ಲಿ ಯಾವುದೇ ಕಾರಣಕ್ಕೂ ಅಡ್ಡಮತದಾನವಾಗಬಾರದು ಎಂಬ ಉದ್ದೇಶದಿಂದ ತನ್ನ 105 ಜನ ಶಾಸಕರಿಗೂ ವಿಪ್ ಜಾರಿ ಮಾಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News