ಉಡುಪಿ: ಲಿಂಗತ್ವ ಅಲ್ಪಸಂಖ್ಯಾತರಿಗೆ ಗುರುತಿನ ಚೀಟಿ ವಿತರಣೆ

Update: 2019-07-16 14:52 GMT

ಉಡುಪಿ, ಜು.16: ಲಿಂಗತ್ವ ಅಲ್ಪಸಂಖ್ಯಾತರ ನೀತಿ 2017ರಂತೆ ಸರಕಾರದ ವಿವಿಧ ಇಲಾಖೆಗಳ ಯೋಜನೆಗಳನ್ನು ಅವರಿಗೆ ಒದಗಿಸಲು ಗುರುತು ಚೀಟಿಯನ್ನು ವಿತರಿಸಲಾಗುತ್ತಿದೆ.

ಆದುದರಿಂದ ವಿಶೇಷ ನೊಂದಾವಣಿ ಅಭಿಯಾನದ ಮೂಲಕ ಆಗಸ್ಟ್ ತಿಂಗಳಲ್ಲಿ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ತಹಶೀಲ್ದಾರರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿ, ಲಿಂಗತ್ವ ಅಲ್ಪಸಂಖ್ಯಾತರ ನೋಂದಣಿ ಮಾಡಿ ಗುರುತಿನ ಚೀಟಿ ವಿತರಿಸಲಾಗುವುದು. ಆದುದರಿಂದ ಈ ಸಮುದಾಯದವರು ಗುರುತು ಚೀಟಿ ಪಡೆಯಲು ಅವಶ್ಯಕ ಮಾಹಿತಿಯನ್ನು ಜು.31ರೊಳಗೆ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ರಜತಾದ್ರಿ, ಮಣಿಪಾಲ ಇವರಿಗೆ ಸಲ್ಲಿಸುವಂತೆ ತಿಳಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ:0820-2574978ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿದೇಶರ್ಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News