ಶಿಕ್ಷಣ ಜೀವನದುದ್ದಕ್ಕೂ ಜೊತೆಗಿರುವ ಆಸ್ತಿ: ಹಾಸನ ಜಿಲ್ಲಾಧಿಕಾರಿ ಅಕ್ರಂ ಪಾಷಾ

Update: 2019-07-16 15:21 GMT

ಹಾಸನ,ಜು.16: ಶಿಕ್ಷಣವು ಜೀವನದುದ್ದಕ್ಕೂ ಜೊತೆಗಿರುವ ಆಸ್ತಿ, ಉತ್ತಮ ಭವಿಷ್ಯ ನಿರ್ಮಾಣಕ್ಕೆ ಉತ್ತಮ ವಿಧ್ಯಾಭ್ಯಾಸ ಪೂರಕವಾಗಿರುತ್ತದೆ ಎಂದು ಜಿಲ್ಲಾಧಿಕಾರಿ ಅಕ್ರಂ ಪಾಷಾ ಹೇಳಿದರು.

ಸರ್ಕಾರಿ ಸ್ವಾಯತ್ತ ಕಲಾ, ವಾಣಿಜ್ಯ ಮತ್ತು ಸ್ನಾತಕೋತ್ತರ ಕಾಲೇಜು ಸಭಾಂಗಣದಲ್ಲಿಂದು ಆಯೋಜಿಸಲಾಗಿದ್ದ ಪ್ರಥಮ ವರ್ಷದ ಪಧವಿ ವಿದ್ಯಾರ್ಥಿಗಳ ಅಭಿವಿನ್ಯಾಸ ಕಾರ್ಯಕ್ರಮವನ್ನು ಉಧ್ಘಾಟಿಸಿ ಮಾತನಾಡಿದ ಅವರು, ಕಾಲೇಜು ಜೀವನದ ಅತ್ಯಮೂಲ್ಯ ಕ್ಷಣಗಳನ್ನು ವ್ಯರ್ಥ ಮಾಡದೇ ಜ್ಞಾನ ಸಂಪಾದನೆಯ ಮೂಲಕ ಸಮಾಜಕ್ಕೆ ಉತ್ತಮ ಕೊಡುಗೆಗಳನ್ನು ನೀಡಿ ಎಂದು ತಿಳಿಸಿದರು.

ತಮ್ಮ ಕಾಲೇಜು ಜೀವನದ ಅನುಭವಗಳನ್ನು ವಿದ್ಯಾರ್ಥಿಗಳೊಂದಿಗೆ ಹಂಚಿಕೊಂಡ ಅವರು ಉಪನ್ಯಾಸಕರುಗಳ ಮಾರ್ಗದರ್ಶನ ನಮಗೆ ದಾರಿದೀಪವಾಗಿದ್ದು, ಪ್ರತಿಭೆ ಇರುವ ಪ್ರತಿಯೊಬ್ಬರೂ ಐ.ಎ.ಎಸ್, ಐ.ಪಿ.ಎಸ್ ಗಳಂತಹ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ತೇರ್ಗಡೆಯಾಗಿ ಉತ್ತಮ ಸಮಾಜ ನಿರ್ಮಾಣಕ್ಕೆ ಶ್ರಮಿಸಲು ಸಾಧ್ಯ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಸಾಧನೆಗಳನ್ನು ಮಾಡಲು ಪದವಿ ಪ್ರಾರಂಬಿಕ ಹಂತವಾಗಿದ್ದು, ಶ್ರದ್ಧೆ, ಆಸಕ್ತಿಯಿಂದ ಏನಾದರೂ ಸಾಧಿಸಬಹುದು. ತಂದೆ ತಾಯಿಗಳ ನಿರೀಕ್ಷೆಗೂ ಮೀರಿದ ಸಾಧನೆಗಳನ್ನು ಮಾಡುವ ಮೂಲಕ ಸಮಾಜಕ್ಕೆ ಉತ್ತಮ ಪ್ರಜೆಗಳಾಗಿ ಎಂದು ಜಿಲ್ಲಾಧಿಕಾರಿ ಅಕ್ರಂ ಪಾಷ ಹೇಳಿದರು.

ಸರ್ಕಾರಿ ಸ್ವಾಯತ್ತ ವಿಜ್ಞಾನ ಕಾಲೇಜಿನ ಪ್ರಾಂಶುಪಾಲರಾದ ಎಸ್.ಎಸ್ ಗಂಗೇಗೌಡ ಮಾತನಾಡಿ, ವಿದ್ಯಾರ್ಥಿಗಳು ಶಿಸ್ತಿನ ಸಿಪಾಯಿಗಳಾಗಬೇಕು. ಹಾಗಿದ್ದಾಗ ಮಾತ್ರ ಶಾಂತಿಯುತ ಸಮಾಜ ನಿರ್ಮಾಣ ಸಾಧ್ಯ. ಶಿಕ್ಷಣದ ಪ್ರತಿಯೊಂದು ವಿಭಾಗವೂ ತನ್ನದೇ ಆದ ಮಹತ್ವವನ್ನು ಹೊಂದಿದೆ. ಅವುಗಳ ಸಮರ್ಪಕ ಅಧ್ಯಯನ ಹಾಗೂ ಗ್ರಂಥಾಲಯಗಳ ಸಮರ್ಪಕ ಬಳಕೆಯಿಂದ ಹೆಚ್ಚಿನ ಜ್ಞಾನ ಸಂಪಾದಿಸಿಕೊಳ್ಳಿ ಎಂದು ಕಿವಿ ಮಾತು ಹೇಳಿದರು.

ಕಾರ್ಯಕ್ರಮದಲ್ಲಿ ಸರ್ಕಾರಿ ಸ್ವಾಯತ್ತ ಕಲಾ, ವಾಣಿಜ್ಯ ಮತ್ತು ಸ್ನಾತಕೋತ್ತರ ಕಾಲೇಜಿನ ಶೈಕ್ಷಣಿಕ ಡೀನ್‍ರಾದ ಡಾ. ಉದಯ್ ಕುಮಾರ್, ಪರಿಕ್ಷಾಂಗ ನಿಯಂಯತ್ರಕರಾದ ಡಾ. ಸುನೀತ ಬಿ. ವ್ಯವಸ್ಥಾಪಕರಾದ ಧರ್ಮಪ್ಪ, ಅಧೀಕ್ಷಕರಾದ ಸತ್ಯಮೂರ್ತಿ ಕೆ.ಟಿ., ಪ್ರಾಂಶುಪಾಲರಾದ ರಾಜಪ್ಪ ಸಿ. ಮತ್ತಿತರರು ಹಾಜರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News