ಬಹುಮತ ಸಾಬೀತುಪಡಿಸುವಲ್ಲಿ ನಾವು ಯಶಸ್ವಿಯಾಗುತ್ತೇವೆ: ತನ್ವೀರ್ ಸೇಠ್

Update: 2019-07-16 16:57 GMT

ಬೆಂಗಳೂರು, ಜು.16: ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕರ ರಾಜೀನಾಮೆ ಹಿಂದೆ ನಾವಿಲ್ಲ ಎಂದು ಬಿಜೆಪಿ ನಾಯಕರು ಹೇಳುತ್ತಿದ್ದರು. ಎಂಟಿಬಿ ನಾಗರಾಜ್, ರೋಷನ್ ಬೇಗ್‌ರನ್ನು ಕರೆದುಕೊಂಡು ಹೋಗಲು ಬಂದವರು ಯಾರು ಎಂದು ಬಿಜೆಪಿ ನಾಯಕರ ವಿರುದ್ಧ ಮಾಜಿ ಸಚಿವ ತನ್ವೀರ್ ಸೇಠ್ ವಾಗ್ದಾಳಿ ನಡೆಸಿದರು.

ಮಂಗಳವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಕ್ಕು ಕಣ್ಣು ಮುಚ್ಚಿ ಹಾಲು ಕುಡಿದರೆ ಗೊತ್ತಾಗುವುದಿಲ್ಲವೇ? ಬಿಜೆಪಿ ನಾಯಕರ ನಾಟಕ ಎಲ್ಲರಿಗೂ ಗೊತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸುಪ್ರೀಂಕೋರ್ಟ್‌ನಲ್ಲಿ ಶಾಸಕರ ರಾಜೀನಾಮೆ ಕುರಿತು ವಿಚಾರಣೆ ನಡೆಯುತ್ತಿದೆ. ಸ್ಪೀಕರ್ ನಿರ್ಧಾರದ ಬಗ್ಗೆ ಸುಪ್ರೀಂಕೋರ್ಟ್ ತೀರ್ಪು ನೀಡುವ ನಿರೀಕ್ಷೆಯಿದೆ. ಬಹುಮತ ಸಾಬೀತುಪಡಿಸುವಲ್ಲಿ ನಾವು ಯಶಸ್ವಿಯಾಗುತ್ತೇವೆ ಎಂದು ತನ್ವೀರ್ ಸೇಠ್ ವಿಶ್ವಾಸ ವ್ಯಕ್ತಪಡಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News