ದೇವರ ಮೊರೆ ಹೋದ ಮುಖ್ಯಮಂತ್ರಿ

Update: 2019-07-16 16:59 GMT

ಬೆಂಗಳೂರು, ಜು. 16: ಅತೃಪ್ತ ಶಾಸಕರ ರಾಜೀನಾಮೆ ಹಿನ್ನೆಲೆಯಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಮುಖ್ಯಮಂತ್ರಿ ಕುಮಾರಸ್ವಾಮಿ, ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರಕಾರ ಉಳಿಸಿಕೊಳ್ಳಲು ದೇವರ ಮೊರೆ ಹೋಗಿದ್ದಾರೆ.

ಮಂಗಳವಾರ ಇಲ್ಲಿನ ತ್ಯಾಗರಾಜ ನಗರದಲ್ಲಿನ ದತ್ತಾತ್ರೇಯ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ನೆರವೇರಿಸಿದರು. ಚಂದ್ರಗ್ರಹಣದ ಹಿನ್ನೆಲೆಯಲ್ಲಿ ದತ್ತಾತ್ರೇಯ ಸ್ವಾಮಿಗೆ ಮುಖ್ಯಮಂತ್ರಿ ಕುಮಾರಸ್ವಾಮಿ ವಿಶೇಷ ಪೂಜೆ ಸಲ್ಲಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಅನಂತರ ಪದ್ಮನಾಭನಗರದಲ್ಲಿನ ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ದೇವೇಗೌಡ ಅವರನ್ನು ಭೇಟಿ ಮಾಡಿದ ಕುಮಾರಸ್ವಾಮಿ ಪ್ರಸಕ್ತ ರಾಜಕೀಯ ವಿದ್ಯಮಾನಗಳು, ಸರಕಾರ ರಕ್ಷಣೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಹಾಗೂ ಕಾಂಗ್ರೆಸ್ ಮುಖಂಡರ ಸಹಕಾರ ಬಗ್ಗೆ ಚರ್ಚಿಸಿದ್ದಾರೆಂದು ಹೇಳಲಾಗಿದೆ.

ಗುರುವಾರ (ಜು.18) ವಿಧಾನಸಭೆಯಲ್ಲಿ ವಿಶ್ವಾಸ ಮತ ಯಾಚನೆ ನಿರ್ಣಯ ಚರ್ಚೆಗೆ ಬರಲಿರುವ ಹಿನ್ನೆಲೆಯಲ್ಲಿ ತಾವು ಕೈಗೊಳ್ಳಬೇಕಾದ ಕಾರ್ಯಗಳ ಬಗ್ಗೆ ದೇವೇಗೌಡರಿಂದ ಸಲಹೆ, ಮಾರ್ಗದರ್ಶನವನ್ನು ಮುಖ್ಯಮಂತ್ರಿ ಕುಮಾರಸ್ವಾಮಿ ಪಡೆದಿದ್ದಾರೆಂದು ಮೂಲಗಳು ತಿಳಿಸಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News