ಒಂಟಿ ಮಹಿಳೆಯ ಕೊಲೆ ಪ್ರಕರಣ: ಆರೋಪಿ ಅಂಬರೀಶ್ ಮತ್ತೆ ಪೊಲೀಸ್ ಕಸ್ಟಡಿಗೆ

Update: 2019-07-16 17:12 GMT

ಉಡುಪಿ, ಜು.16: ಪುತ್ತೂರು ಗ್ರಾಮದ ಸುಬ್ರಹ್ಮಣ್ಯ ನಗರದ ಒಂಟಿ ಮಹಿಳೆ ರತ್ನಾವತಿ ಶೆಟ್ಟಿ ಕೊಲೆ ಪ್ರಕರಣದ ಆರೋಪಿ ಧಾರವಾಡ ಜಿಲ್ಲೆಯ ನರಗುಂದ ನಿವಾಸಿ ಅಂಬರೀಶ್ (31)ನನ್ನು ಪೊಲೀಸರು ಮತ್ತೆ ನಾಲ್ಕು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಪಡೆದುಕೊಂಡಿದ್ದಾರೆ.

ಜು.9ರಂದು ಗೋವಾದಲ್ಲಿ ಬಂಧಿಸಲ್ಪಟ್ಟ ಆರೋಪಿಗಳಾದ ಅಂಬರೀಶ್ ಹಾಗೂ ಆತನ ಪತ್ನಿ ರಶೀದಾ ಯಾನೆ ಜ್ಯೋತಿ(26)ಯನ್ನು ಏಳು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಪಡೆದುಕೊಳ್ಳಲಾಗಿತ್ತು. ಇದೀಗ ಇವರ ಕಸ್ಟಡಿ ಅವಧಿ ಮುಗಿದ ಹಿನ್ನೆಲೆಯಲ್ಲಿ ಇಂದು ಇಬ್ಬರನ್ನು ಪೊಲೀಸರು ಉಡುಪಿ ನ್ಯಾಯಾ ಲಯಕ್ಕೆ ಹಾಜರುಪಡಿಸಿದರು.

ಹೆಚ್ಚಿನ ತನಿಖೆಯ ಹಿನ್ನೆಲೆಯಲ್ಲಿ ಆರೋಪಿಗಳ ಪೈಕಿ ಅಂಬರೀಶ್‌ನನ್ನು ಪೊಲೀಸರು ಮತ್ತೆ ನಾಲ್ಕು ದಿನಗಳ ಅಂದರೆ ಜು.19ರವರೆಗೆ ಪೊಲೀಸ್ ಕಸ್ಟಡಿಗೆ ಪಡೆದುಕೊಂಡಿದ್ದಾರೆ. ಜ್ಯೋತಿಯನ್ನು ನ್ಯಾಯಾಲಯ 15 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಚಿನ್ನಾಭರಣ ವಶ: ಕೊಲೆ ಮಾಡಿದ ಬಳಿಕ ದೋಚಿ ಚಿಕ್ಕಮಗಳೂರು ಹಾಗೂ ಗೋವಾ ರಾಜ್ಯಗಳಲ್ಲಿ ಮಾರಾಟ ಮಾಡಿದ್ದ ಚಿನ್ನಾಭರಣಗಳನ್ನು ಪೊಲೀಸರು ಸ್ವಾಧೀನ ಪಡಿಸಿಕೊಂಡಿದ್ದಾರೆ.

ಏಳು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಪಡೆದುಕೊಂಡ ನಂತರ ಆರೋಪಿ ಗಳು ನೀಡಿದ ಮಾಹಿತಿಯಂತೆ ಚಿಕ್ಕಮಗಳೂರು ಹಾಗೂ ಗೋವಾ ದಲ್ಲಿ ಮಾರಾಟ ಮಾಡಿದ್ದ ಸುಮಾರು ಎರಡು ಲಕ್ಷ ರೂ. ಮೌಲ್ಯದ ಚಿನ್ನಾಭರಣ ಗಳನ್ನು ಪೊಲೀಸರು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿ ದ್ದಾರೆ ಎಂದು ತಿಳಿದು ಬಂದಿದೆ.

ಈ ದಂಪತಿ ಆರೋಪಿಗಳ ವಿರುದ್ಧ ಕುಷ್ಠಗಿ, ಹುಬ್ಬಳ್ಳಿ, ಬಿಜಾಪುರ, ಮಂಗ ಳೂರಿನ ಕಾವೂರು ಸೇರಿದಂತೆ ಹಲವು ಪೊಲೀಸ್ ಠಾಣೆಗಳಲ್ಲಿ ಕಳವು ಪ್ರಕರಣಗಳು ದಾಖಲಾಗಿವೆ. ಇವರು ಒಂಟಿಯಾಗಿ ವಾಸ ಮಾಡುವ ಮಹಿಳೆಯರು ಹಾಗೂ ಹಿರಿಯರನ್ನು ಗುರಿಯಾಗಿರಿಸಿಕೊಂಡು ಈ ಕೃತ್ಯ ಎಸಗುತ್ತಿದ್ದೆಂಬುದು ತನಿಖೆಯಿಂದ ತಿಳಿದುಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News