ಬೆಂಕಿ ಹಚ್ಚಿಕೊಂಡು ಮಹಿಳೆ ಆತ್ಮಹತ್ಯೆ

Update: 2019-07-16 17:17 GMT

ಬೈಂದೂರು, ಜು.16: ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆ ಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಜು.15ರಂದು ಉಪ್ಪುಂದ ಗ್ರಾಮದ ಅಂಬಾಗಿಲು ಎಂಬಲ್ಲಿ ನಡೆದಿದೆ.

ಮೃತರನ್ನು ಅಂಬಾಗಿಲು ನಿವಾಸಿ ಉಮಾ (60) ಎಂದು ಗುರುತಿಸಲಾಗಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ಇವರು ಜೀವನದಲ್ಲಿ ಜಿಗುಪ್ಸೆ ಹೊಂದಿ ಜು.15ರಂದು ಬೆಳಗ್ಗೆ 10ಗಂಟೆಗೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ಬಾತ್ ರೂಮ್ನಲ್ಲಿ ಮೈಮೇಲೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿಕೊಂಡಿದ್ದರು.

ಇದರಿಂದ ಗಂಭೀರವಾಗಿ ಗಾಯಗೊಂಡು ಮಣಿಪಾಲ ಆಸ್ಪತ್ರೆಯಲ್ಲಿ ದಾಖ ಲಾಗಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ರಾತ್ರಿ 8ಗಂಟೆ ಸುಮಾರಿಗೆ ಮೃತ ಪಟ್ಟರು. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News