ಸುಪ್ರೀಂ ಕೋರ್ಟ್ ಆದೇಶ ಪಾಲಿಸುವೆ : ಸ್ಪೀಕರ್ ರಮೇಶ್ ಕುಮಾರ್

Update: 2019-07-17 05:44 GMT

ಹೊಸದಿಲ್ಲಿ, ಜು.17: ಹದಿನೈದು ಶಾಸಕರ ರಾಜೀನಾಮೆ ಬಗ್ಗೆ ಸ್ಪೀಕರ್ ತೀರ್ಮಾನ ಕೈಗೊಳ್ಳಬೇಕು. ಅವರ ತೀರ್ಮಾನವೇ ಅಂತಿಮ. ಕಾಲ ಮಿತಿಯಲ್ಲಿ ಸ್ಪೀಕರ್ ತೀರ್ಪು ಪ್ರಕಟಿಸಬೇಕು ಎಂದು ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ನೇತೃತ್ವದ ತ್ರಿಸದಸ್ಯ ಪೀಠ ಬುಧವಾರ ತೀರ್ಪು ನೀಡಿದ್ದು, ಸುಪ್ರೀಂ ಕೋರ್ಟ್ ಆದೇಶ ಪಾಲಿಸುವೆ ಮತ್ತು ಸ್ವಾಗತಿಸುವೆ ಎಂದು ಸ್ಪೀಕರ್ ರಮೇಶ್ ಕುಮಾರ್ ಪ್ರತಿಕ್ರಿಯಿಸಿದ್ದಾರೆ.

ಸುಪ್ರೀಂ ಕೋರ್ಟ್ ದೇಶದ ಪರಮೋಚ್ಚ ನ್ಯಾಯಾಂಗ ಸಂಸ್ಥೆ. ನನ್ನ ಮೇಲೆ ದೊಡ್ಡ ಹೊರೆ ಹೊರಿಸಿದೆ. ನಿಯಮಾವಳಿ ಚೌಕಟ್ಟಿನಲ್ಲಿ ನಿಭಾಯಿಸುವೆ ಎಂದು ಅವರು ತಿಳಿಸಿದ್ದಾರೆ.

‘‘ಅಧಿವೇಶನದಲ್ಲಿ ಭಾಗವಹಿಸುವುದು ಶಾಸಕರಿಗೆ ಬಿಟ್ಟ ವಿಚಾರ. ಈ ಕುರಿತು ಅವರನ್ನು ಒತ್ತಾಯ ಮಾಡುವಂತಿಲ್ಲ. ಸ್ಪೀಕರ್ ನಿರ್ಧಾರದವರೆಗೂ ಶಾಸಕರಿಗೆ ಅಧಿವೇಶನದಲ್ಲಿ ಭಾಗವಹಿಸಲು ಒತ್ತಾಯಿಸುವಂತಿಲ್ಲ. ಶಾಸಕರಿಗೆ ವಿಪ್ ಅನ್ವಯವಾಗುವುದಿಲ್ಲ. ರಾಜೀನಾಮೆ ಪ್ರಕರಣ ಅನುಚ್ಚೇದ 190ರ ಅಡಿ ಇತ್ಯರ್ಥ ಮಾಡಬೇಕು ಎಂದು ಸುಪ್ರೀಂಕೋರ್ಟ್ ತನ್ನ ತೀರ್ಪಿನಲ್ಲಿ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News