ವಿಶ್ವಾಸಮತ ಪ್ರಕ್ರಿಯೆಯಲ್ಲಿ ಭಾಗವಹಿಸುವುದಿಲ್ಲ: ಕಾಂಗ್ರೆಸ್-ಜೆಡಿಎಸ್ ಬಂಡಾಯ ಶಾಸಕರು

Update: 2019-07-17 08:16 GMT

ಮುಂಬೈ, ಜು.17: ನಾವು ಸುಪ್ರೀಂಕೋರ್ಟ್‌ನ ತೀರ್ಪನ್ನು ಗೌರವಿಸುತ್ತೇವೆ. ನಾವೆಲ್ಲರೂ ಒಟ್ಟಾಗಿದ್ದೇವೆ. ನಮ್ಮ ನಿರ್ಧಾರಕ್ಕೆ ನಾವು ಬದ್ಧರಾಗಿದ್ದೇವೆ. ಹಿಂತಿರುಗಿ ಹೋಗಿ ವಿಧಾನಸಭೆಯ ಕಲಾಪಕ್ಕೆ ಹಾಜರಾಗುವ ಪ್ರಶ್ನೆಯೇ ಇಲ್ಲ. ವಿಶ್ವಾಸ ಮತ ಪ್ರಕ್ರಿಯೆಯಲ್ಲಿ ಭಾಗವಹಿಸುವುದಿಲ್ಲ ಎಂದು ಮುಂಬೈನಲ್ಲಿ ಬೀಡುಬಿಟ್ಟಿರುವ ಕಾಂಗ್ರೆಸ್-ಜೆಡಿಎಸ್ ಶಾಸಕರು ಸುದ್ದಿಗಾರರಿಗೆ ತಿಳಿಸಿದ್ದಾರೆ.

ನಾಳಿನ ವಿಶ್ವಾಸಮತವನ್ನು ಗಮನದಲ್ಲ್ಲಿಟ್ಟುಕೊಂಡು ಕೋರ್ಟ್ ತನ್ನ ಆದೇಶದಲ್ಲಿ ಎರಡು ಮುಖ್ಯ ವಿಚಾರಗಳನ್ನು ಪ್ರಸ್ತಾವಿಸಿದೆ. ರಾಜೀನಾಮೆ ನೀಡಿರುವ 15 ಶಾಸಕರು ನಾಳೆಯ ಸದನಕ್ಕೆ ಬರಬೇಕೆಂದು ಒತ್ತಾಯಿಸುವಂತಿಲ್ಲ. 15 ಶಾಸಕರು ಹೋಗಬಹುದು, ಹೋಗದಿರಬಹುದು ಎಂದು ಅತೃಪ್ತ ಶಾಸಕರ ಪರ ವಕೀಲ ಮುಕುಲ್ ರೋಹಟಗಿ ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News