ಮಂಗಳೂರು: ಗ್ರಾಮ ಲೆಕ್ಕಾಧಿಕಾರಿಗಳಿಂದ ಪ್ರತಿಭಟನೆ

Update: 2019-07-17 12:33 GMT

ಮಂಗಳೂರು, ಜು.17: ರಾಜ್ಯ ಗ್ರಾಮ ಲೆಕ್ಕಾಧಿಕಾರಿಗಳ ಕೇಂದ್ರ ಸಂಘದ ಕರೆಯಂತೆ ಗ್ರಾಮಲೆಕ್ಕಾಧಿಕಾರಿಗಳ ಕುಂದುಕೊರತೆ ಮತ್ತು ಮುಂಬಡ್ತಿಯಲ್ಲಿ ಉಂಟಾಗುತ್ತಿರುವ ಅನ್ಯಾಯವನ್ನು ಖಂಡಿಸಿ ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ಸಂಘದ ದ.ಕ.ಜಿಲ್ಲಾ ಸಮಿತಿಯ ವತಿಯಿಂದ ಬುಧವಾರ ದ.ಕ.ಜಿಲ್ಲಾಧಿಕಾರಿಯ ಕಚೇರಿಯ ಮುಂದೆ ಪ್ರತಿಭಟನೆ ನಡೆಯಿತು.

ಇತರ ಇಲಾಖೆಯ ಕೆಲಸಗಳನ್ನು ಕಂದಾಯ ಇಲಾಖೆಯ ನೌಕರರ ಮೇಲೆ ಹೇರುತ್ತಿರುವ ಬಗ್ಗೆ ಸ್ಪಷ್ಟ ಆದೇಶ ನೀಡದಿರುವುದು, ರಜಾ ದಿನಗಳಲ್ಲಿ ಕೆಲಸ ಒತ್ತಡ ಹೇರಲಾಗುತ್ತದೆ, ಮುಂಭಡ್ತಿಯಲ್ಲಿ ಅನ್ಯಾಯ ಎಸಗಲಾಗುತ್ತದೆ, ಪ್ರಯಾಣ ಭತ್ತೆಯನ್ನು ಹೆಚ್ಚಿಸಬೇಕು, ಜಾಬ್ ಕಾರ್ಡ್ ನೀಡದಿರುವುದು, ಗ್ರಾಮ ಸಹಾಯಕರ ಹುದ್ದೆಯನ್ನು ಖಾಯಂಗೊಳಿಸದಿರುವುದನ್ನು ಖಂಡಿಸಿ ಪ್ರತಿಭಟಿಸಲಾಯಿತು.

ಪ್ರತಿಭಟನೆಯಲ್ಲಿ ಸಂಘದ ಜಿಲ್ಲಾಧ್ಯಕ್ಷ ಜನಾರ್ದನ ಜೆ., ಇತರ ಪದಾಧಿಕಾರಿಗಳಾದ ಪ್ರದೀಪ್ ಕುಮಾರ್, ಪ್ರಮೋದ್ ಕುಮಾರ್, ಸುನಿಲ್ ಮತ್ತಿತರರು ಪಾಲ್ಗೊಂಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News