'ನಮ್ಮ ಕ್ಷೇತ್ರದ ಶಾಸಕರನ್ನು ಹುಡುಕಿಕೊಡಿ': ಕ್ಷೇತ್ರಗಳ ಜನತೆಯಿಂದ ಸ್ಪೀಕರ್ ಗೆ ದೂರು

Update: 2019-07-17 13:16 GMT

ಬೆಂಗಳೂರು, ಜು. 16: ‘ನಮ್ಮ ಕ್ಷೇತ್ರದ ಶಾಸಕರು ಕಾಣೆಯಾಗಿದ್ದು ಅವರನ್ನು ಹುಡುಕಿಕೊಡಲು ಸಂಬಂಧಪಟ್ಟವರಿಗೆ ನಿರ್ದೇಶನ ನೀಡಬೇಕು’ ಎಂದು ವಿಧಾನಸಭೆ ಸ್ಪೀಕರ್ ಕೆ.ಆರ್.ರಮೇಶ್‌ಕುಮಾರ್ ಅವರಿಗೆ ರಾಜರಾಜೇಶ್ವರಿನಗರ, ಕೆ.ಆರ್.ಪುರ ಹಾಗೂ ಯಶವಂತಪುರ ಕ್ಷೇತ್ರಗಳ ಜನತೆ ಪ್ರತ್ಯೇಕ ದೂರು ನೀಡಿದ್ದಾರೆ.

ಶಾಸಕರಾದ ಮುನಿರತ್ನ, ಬೈರತಿ ಬಸವರಾಜು ಹಾಗೂ ಎಸ್.ಟಿ.ಸೋಮಶೇಖರ್ ವಿರುದ್ಧ ದೂರು ನೀಡಿದ್ದು, ಕೆಲ ದಿನಗಳಿಂದ ನಮ್ಮ ಕ್ಷೇತ್ರದ ಶಾಸಕರು ಕಾಣೆಯಾಗಿದ್ದು, ಕ್ಷೇತ್ರದ ಮತದಾರರು ಹಾಗೂ ಪಕ್ಷದ ಕಾರ್ಯಕರ್ತರಿಗೆ ಆಘಾತವಾಗಿದೆ. ಕ್ಷೇತ್ರದಲ್ಲಿ ಜನತೆ ಕುಡಿಯುವ ನೀರಿಗಾಗಿ ಹಾಹಾಕಾರ ಎದುರಿಸುತ್ತಿದ್ದು, ಜನತೆಗೆ ಆತಂಕ ಮೂಡಿಸಿದೆ.

ಕಾಂಗ್ರೆಸ್ ಪಕ್ಷದ ಚಿಹ್ನೆಯಿಂದ ಚುನಾಯಿತರಾದ ಶಾಸಕರನ್ನು ಸಂಪರ್ಕಕ್ಕೆ ಸಿಗದಿರುವುದು ಅವರ ಭದ್ರತೆಗೆ ಆತಂಕ ಉಂಟು ಮಾಡಿದೆ. ಶಾಸಕರ ನಾಪತ್ತೆಯಾಗಿರುವುದರ ಹಿಂದೆ ಪಟ್ಟಭದ್ರ ಹಿತಾಸಕ್ತಿಗಳ ಕೈವಾಡವಿದ್ದು, ಶಾಸಕರಿಗೆ ಬೆದರಿಕೆ ಒಡ್ಡಿ ಅವರನ್ನು ಅಕ್ರಮ ಬಂಧನದಲ್ಲಿಟ್ಟುಕೊಂಡಿರುವ ಸಂಶಯವಿದೆ ಎಂದು ದೂರಿನಲ್ಲಿ ಆತಂಕ ವ್ಯಕ್ತಪಡಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News