ಹಿರಿಯಡ್ಕ: ಆರೋಗ್ಯವಂತ ಶಿಶು ಪ್ರದರ್ಶನ

Update: 2019-07-17 15:29 GMT

ಉಡುಪಿ, ಜು.17: ಪ್ರಾಥಮಿಕ ಆರೋಗ್ಯ ಕೇಂದ್ರ ಹಿರಿಯಡ್ಕ, ಲಯನ್ಸ್ ಕ್ಲಬ್ ಹಿರಿಯಡ್ಕ ಹಾಗೂ ಲಯನ್ಸ್ ಕ್ಲಬ್ ಇಂದ್ರಾಳಿ ಇವರ ಸಂಯುಕ್ತ ಆಶ್ರಯದಲ್ಲಿ ಆರೋಗ್ಯವಂತ ಶಿಶು ಪ್ರದರ್ಶನ ಮತ್ತು ವಿಶ್ವ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮ ಬುಧವಾರ ಹಿರಿಯಡ್ಕ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಜರುಗಿತು

ಹಿರಿಯಡ್ಕದ ಜಿಪಂ ಸದಸ್ಯೆ ಚಂದ್ರಿಕಾ ಕೇಲ್ಕರ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಹಿರಿಯಡ್ಕ ಲಯನ್ಸ್ ಕ್ಲಬ್ ಅಧ್ಯಕ್ಷ ಮೋಹನ್‌ದಾಸ್ ಆಚಾರ್ಯ ಮತ್ತು ಇಂದ್ರಾಳಿ ಲಯನ್ಸ್ ಕ್ಲಬ್ ಅಧ್ಯಕ್ಷ ಹೃಷಿಕೇಶ್ ಹೆಗ್ಡೆ ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆಯ ಕರಪತ್ರವನ್ನು ತಾಪಂ ಸದಸ್ಯ ಲಕ್ಷ್ಮೀನಾರಾಯಣ ಪ್ರಭು, ಕ್ಷಯ ರೋಗದ ಎಸಿಎಫ್ ಕರಪತ್ರವನ್ನು ಬೊಮ್ಮಾರಬೆಟ್ಟು ಗ್ರಾಪಂ ಉಪಾಧ್ಯಕ್ಷ ಹರೀಶ್ ಸಾಲ್ಯಾನ್ ಬಿಡುಗಡೆ ಗೊಳಿಸಿದರು. ಆರೋಗ್ಯವಂತ ಶಿಶುಗಳ ಪ್ರದರ್ಶನದಲ್ಲಿ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು.

ಹಿರಿಯಡ್ಕ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಸತ್ಯಶಂಕರ್ ಪ್ರಾಸ್ತಾವಿಕವಾಗಿ ಮಾತನಾಡಿದರು.ವಿಜಯಬಾಯಿ ಕೆ. ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಬಸವರಾಜ್ ಜಾಡರ್ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News