ಜು.21ಕ್ಕೆ ಭುವನೇಂದ್ರ ಕಿದಿಯೂರ್‌ಗೆ 75ರ ಅಭಿನಂದನೆ

Update: 2019-07-17 15:52 GMT

ಉಡುಪಿ, ಜು.17: ಉಡುಪಿಯ ಉದ್ಯಮಿ ಹಾಗೂ ಸಮಾಜಮುಖಿ ಕಾರ್ಯಗಳಲ್ಲಿ ತನ್ನನ್ನು ತೊಡಗಿಸಿಕೊಂಡಿರುವ ಭುವನೇಂದ್ರ ಕಿದಿಯೂರು ಅವರಿಗೆ 75ರ ಸಂಭ್ರಮದ ಅಭಿನಂದನಾ ಕಾರ್ಯಕ್ರಮ ‘ರತ್ನೋತ್ಸವ’ ಜು.21ರ ರವಿವಾರ ಅಂಬಲಪಾಡಿಯ ಶ್ಯಾಮಿಲಿ ಸಭಾಭವನದಲ್ಲಿ ನಡೆಯಲಿದೆ ಎಂದು ಶ್ರೀಭುವನೇಂದ್ರ ಕಿದಿಯೂರು ಅಭಿನಂದನ ಸಮಿತಿಯ ಉಪಾಧ್ಯಕ್ಷ ಹರಿಯಪ್ಪ ಕೋಟ್ಯಾನ್ ಅವರು ತಿಳಿಸಿದ್ದಾರೆ.

ಬುಧವಾರ ಇಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕಾರ್ಯಕ್ರಮ ಬೆಳಗ್ಗೆ 9ಗಂಟೆಗೆ ಪ್ರಾರಂಭಗೊಳ್ಳಲಿದೆ ಎಂದರು. 10ಗಂಟೆಗೆ ಪ್ರಾರಂಭಗೊಳ್ಳುವ ಸಭಾಕಾರ್ಯಕ್ರಮದಲ್ಲಿ ಪೇಜಾವರ ಮಠದ ಶ್ರೀವಿಶ್ವೇಶತೀರ್ಥರು, ಕೃಷ್ಣಾಪುರ ಮಠದ ಶ್ರೀವಿದ್ಯಾಸಾಗರ ತೀರ್ಥ ಶ್ರೀ, ಪೇಜಾವರ ಕಿರಿಯ ಯತಿಗಳಾದ ಶ್ರೀವಿಶ್ವಪ್ರಸನ್ನ ತೀರ್ಥರು ಹಾಗೂ ಕಾಣಿಯೂರು ಮಠದ ಶ್ರೀವಿದ್ಯಾವಲ್ಲಭ ತೀರ್ಥ ಶ್ರೀ ಅನುಗ್ರಹ ಸಂದೇಶ ನೀಡಲಿದ್ದಾರೆ ಎಂದರು.

ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ.ಸದಾನಂದ ಗೌಡ ಅವರು ಅಭಿನಂದನಾ ಕಾರ್ಯಕ್ರಮವನ್ನು ಉದ್ಘಾಟಸಲಿದ್ದು, ಮಣಿಪಾಲ ಮಾಹೆಯ ಪ್ರೊ ಚಾನ್ಸಲರ್ ಡಾ.ಎಚ್.ಎಸ್.ಬಲ್ಲಾಳ್ ಅಧ್ಯಕ್ಷತೆ ವಹಿಸಲಿದ್ದಾರೆ. ವಂ. ವಲೇರಿಯನ್ ಮೆಂಡೋನ್ಸ ಶುಭಾಶಂಸನೆ ಮಾಡಿದರೆ, ವಿದ್ವಾಂಸ ಕಬಿಯಾಡಿ ಜಯರಾಮ ಆಚಾರ್ಯ ಅಭಿನಂದನ ಮಾತುಗಳನ್ನಾ ಡಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಸಂಸದೆ ಶೋಭಾ ಕರಂದ್ಲಾಜೆ, ವಿಧಾನಪರಿಷತ್‌ನ ಪ್ರತಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಕೆ.ರಘುಪತಿ ಭಟ್, ಲಾಲಾಜಿ ಮೆಂಡನ್, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಮೂಡಬಿದ್ರೆಯ ಡಾ.ಎಂ.ಮೋಹನ್ ಆಳ್ವ, ಕೋಟದ ಆನಂದ ಸಿ.ಕುಂದರ್, ದ.ಕ.ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ.ಕೋಟ್ಯಾನ್ ಪಾಲ್ಗೊಳ್ಳಲಿದ್ದಾರೆ.

ಎರ್ಮಾಳ್‌ನ ಚಂದ್ರಶೇಖರ್ ಮತ್ತು ಬಳಗದಿಂದ ವಾದ್ಯ ಸಂಗೀತ ಹಾಗೂ ಕೊಡವೂರು ನೃತ್ಯನಿಕೇತನ ಕಲಾವಿದರಿಂದ ಪ್ರಾರ್ಥನಾ ನೃತ್ಯ ಕಾರ್ಯಕ್ರಮವೂ ನಡೆಯಲಿದೆ ಎಂದು ಕೋಟ್ಯಾನ್ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಸಮಿತಿಯ ಪದಾಧಿಕಾರಿಗಳಾದ ಮುರಲಿ ಕಡೇಕಾರ್, ಯುವರಾಜ್, ಮಧುಸೂಧನ್ ಕೆಮ್ಮಣ್ಣು, ರಮೇಶ್ ಕಿದಿಯೂರು, ವಾಸುದೇವ ಭಟ್ ಪೆರಂಪಳ್ಳಿ ಹಾಗೂ ಭಾಸ್ಕರ ಕೋಟ್ಯಾನ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News