ಎಲ್ಲ ಶಾಸಕರಿಗೆ ವಿಪ್ ಜಾರಿ: ಮುಖ್ಯ ಸಚೇತಕ ಗಣೇಶ್ ಹುಕ್ಕೇರಿ

Update: 2019-07-17 16:05 GMT

ಬೆಂಗಳೂರು, ಜು. 16: ನಮ್ಮ ಪಕ್ಷದ ಎಲ್ಲ ಶಾಸಕರಿಗೆ ವಿಪ್ ನೀಡಲಿದ್ದು, ನಾಳೆ ಏನಾಗಲಿದೆ ಎಂಬುದನ್ನು ಕಾದು ನೋಡುತ್ತೇವೆ ಎಂದು ಸರಕಾರದ ಮುಖ್ಯ ಸಚೇತಕ ಹಾಗೂ ಶಾಸಕ ಗಣೇಶ್ ಹುಕ್ಕೇರಿ ತಿಳಿಸಿದ್ದಾರೆ.

ಬುಧವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಅತೃಪ್ತರ ಶಾಸಕರಿಗೆ ಮತ್ತೊಮ್ಮೆ ವಿಪ್ ನೀಡಲಿದ್ದು, ಅಧಿವೇಶನ ಆರಂಭಕ್ಕೂ ಮುನ್ನ ವಿಪ್ ನೀಡಲಾಗಿತ್ತು ಎಂದು ಸ್ಪಷ್ಟನೆ ನೀಡಿದರು.

ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯನವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಿರುವಂತೆ ಶಾಸಕರಿಗೆ ವಿಪ್ ನೀಡಲು ತೀರ್ಮಾನಿಸಿದ್ದು, ಶಾಸಕರ ನಿವಾಸಕ್ಕೆ ಈಗಾಗಲೇ ವಿಪ್ ತಲುಪಿಸಲಾಗಿದೆ ಎಂದು ಅವರು ಇದೇ ಸಂದರ್ಭದಲ್ಲಿ ತಿಳಿಸಿದರು.

‘ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರಕಾರ ವಿಶ್ವಾಸಮತ ಗೆಲ್ಲುವ ವಿಶ್ವಾಸವಿದೆ. ಸುಪ್ರೀಂ ಕೋರ್ಟ್ ವಿಚಾರ ಸ್ಪೀಕರ್ ರಮೇಶ್ ಕುಮಾರ್ ತೀರ್ಮಾನಕ್ಕೆ ಬಿಟ್ಟದ್ದು. ಕೋರ್ಟ್ ತೀರ್ಪು ಸ್ವಲ್ಪ ಗೊಂದಲಮಯವಾಗಿದೆ. ಶಾಸಕಾಂಗ ವ್ಯವಸ್ಥೆಯಲ್ಲಿ ಮಧ್ಯ ಪ್ರವೇಶ ಸರಿಯಲ್ಲ. ಇದು ದೇಶದ ಶಾಸಕಾಂಗ ವ್ಯವಸ್ಥೆಗೆ ಮಧ್ಯ ಪ್ರವೇಶಿಸುವಂತೆ ಆಗಿದೆ. ಪಕ್ಷ ಬೇಧವಿಲ್ಲದೆ ಈ ಬಗ್ಗೆ ಚರ್ಚೆ ಅಗತ್ಯ’

-ಕೆ.ಸಿ.ವೇಣುಗೋಪಾಲ್, ಕಾಂಗ್ರೆಸ್ ಉಸ್ತುವಾರಿ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News