ಮನೆಗೆ ನುಗ್ಗಿ ನಗ ನಗದು ಕಳವು

Update: 2019-07-17 16:11 GMT

 ಉಡುಪಿ, ಜು.17: 76 ಬಡಗುಬೆಟ್ಟು ಗ್ರಾಮದ ಇಂದಿರಾನಗರ 8ನೆ ಕ್ರಾಸ್‌ನಲ್ಲಿರುವ ಮನೆಯೊಂದಕ್ಕೆ ಜು.16ರಂದು ರಾತ್ರಿ ವೇಳೆ ನುಗ್ಗಿದ ಕಳ್ಳರು ಲಕ್ಷಾಂತರ ರೂ. ವೌಲ್ಯದ ನಗ ನಗದು ಕಳವು ಮಾಡಿರುವ ಬಗ್ಗೆ ವರದಿ ಯಾಗಿದೆ.

ಬಾಲಕೃಷ್ಣ ಎಂಬವರ ಮನೆಯ ಮಾಡಿನ ಹೆಂಚನ್ನು ತೆಗೆದು ಒಳನುಗ್ಗಿದ ಕಳ್ಳರು, ಬೆಡ್‌ರೂಂನಲ್ಲಿರುವ ಕಪಾಟಿನ ಬಾಗಿಲು ಮುರಿದು ಅದರಲ್ಲಿದ್ದ ಒಟ್ಟು 98 ಗ್ರಾಂ ತೂಕದ ಚಿನ್ನಾಭರಣಗಳನ್ನು ಹಾಗೂ 5,000ರೂ. ನಗದು ಕಳವುಗೈದಿದ್ದಾರೆ.

ಇವುಗಳ ಒಟ್ಟು ಮೌಲ್ಯ 2,45,000ರೂ. ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News