ಸುಪ್ರೀಂ ತೀರ್ಪು ಪ್ರಜಾಪ್ರಭುತ್ವದ ಗೆಲುವು: ಯಡಿಯೂರಪ್ಪ

Update: 2019-07-17 16:20 GMT

ಬೆಂಗಳೂರು, ಜು.17: ಅತೃಪ್ತ ಶಾಸಕರ ರಾಜೀನಾಮೆಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನೀಡಿರುವ ತೀರ್ಪು ಪ್ರಜಾಪ್ರಭುತ್ವದ ಗೆಲುವು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ಬುಧವಾರ ನಗರದ ಹೊರವಲಯದಲ್ಲಿರುವ ರಮಡ ರೆಸಾರ್ಟ್ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅತೃಪ್ತ ಶಾಸಕರಿಗೆ ಈ ತೀರ್ಪು ನೈತಿಕ ಬಲ ತಂದುಕೊಟ್ಟಿದೆ. ಸರ್ವೋಚ್ಚ ನ್ಯಾಯಾಲಯವು ಸಂವಿಧಾನದ ಆಶಯಗಳಿಗೆ ಅನುಗುಣವಾಗಿ ತೀರ್ಪು ಕೊಟ್ಟಿದೆ ಎಂದರು.

ಸುಪ್ರೀಂಕೋರ್ಟ್ ಈಗ ನೀಡಿರುವುದು ಮಧ್ಯಂತರ ತೀರ್ಪು. ಯಾವುದೇ ಕಾರಣಕ್ಕೂ ರಾಜೀನಾಮೆ ನೀಡಿರುವ 15 ಮಂದಿ ಶಾಸಕರಿಗೆ ವಿಪ್ ಅನ್ವಯವಾಗುವುದಿಲ್ಲ. ಸುಪ್ರೀಂಕೋರ್ಟ್ ಎಲ್ಲ ವಿಚಾರಗಳನ್ನು ಗಂಭೀರವಾಗಿ ಚಿಂತನೆ ನಡೆಸಿ ಶಾಸಕರಿಗೆ ಸದನಕ್ಕೆ ಬರಲು ಒತ್ತಾಯ ಮಾಡುವ ಹಾಗಿಲ್ಲವೆಂದು ತನ್ನ ತೀರ್ಪಿನಲ್ಲಿ ತಿಳಿಸಿದೆ ಎಂದು ಯಡಿಯೂರಪ್ಪ ಹೇಳಿದರು.

ಸುಪ್ರೀಂಕೋರ್ಟ್‌ನ ಈ ಮಧ್ಯಂತರ ಆದೇಶವು ಸಂವಿಧಾನ ಮತ್ತು ಸಂಸದೀಯ ಪ್ರಜಾಪ್ರಭುತ್ವದ ಗೆಲುವು. ಸುಪ್ರೀಂ ತೀರ್ಪಿನ ಅನ್ವಯ ಸ್ಪೀಕರ್ ತೀರ್ಮಾನ ಕೈಗೊಳ್ಳುತ್ತಾರೆ ಎಂಬ ವಿಶ್ವಾಸವಿದೆ ಎಂದು ಯಡಿಯೂರಪ್ಪ ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News