ಮಾದಕ ವಸ್ತು ಮಾರಾಟ: ಓರ್ವನ ಬಂಧನ, 1.25 ಕೆಜಿ ಗಾಂಜಾ ಜಪ್ತಿ

Update: 2019-07-17 16:28 GMT

ಬೆಂಗಳೂರು, ಜು.17: ಮಾದಕ ವಸ್ತು ಗಾಂಜಾ ಮಾರಾಟ ಆರೋಪದಡಿ ಓರ್ವನನ್ನು ಬಂಧಿಸಿರುವ ಸಿಸಿಬಿ ಪೊಲೀಸರು, 1.250 ಕೆ.ಜಿ. ಗಾಂಜಾ ಜಪ್ತಿ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

ನಗರದ ಬಿಟಿಎಂ ಲೇಔಟ್‌ನ ಗುರಪ್ಪನಪಾಳ್ಯ ನಿವಾಸಿ ಫೈರೋಝ್ ಪಾಷ(28) ಬಂಧಿತ ಆರೋಪಿ ಎಂದು ಸಿಸಿಬಿ ತಿಳಿಸಿದೆ.

ಗುರಪ್ಪನಪಾಳ್ಯ 10ನೇ ಮೈನ್‌ನಲ್ಲಿರುವ ಮನೆಯಲ್ಲಿ ಗಾಂಜಾ ಇಟ್ಟುಕೊಂಡು ಮಾರಾಟ ಮಾಡುತ್ತಿದ್ದ ಎಂಬ ಮಾಹಿತಿ ಸಂಗ್ರಹಿಸಿ ದಾಳಿ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಬಂಧಿತ ಆರೋಪಿಯಿಂದ 1 ಕೆ.ಜಿ 250 ಗ್ರಾಂ ತೂಕದ ಗಾಂಜಾ, ಮೊಬೈಲ್, ನಗದು ಜಪ್ತಿ ಮಾಡಿ, ಇಲ್ಲಿನ ಸುದ್ದಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಮುಂದುವರೆಸಲಾಗಿದೆ ಎಂದು ಸಿಸಿಬಿ ಡಿಸಿಪಿ ಎಸ್.ಗಿರೀಶ್ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News