ಟಿಕೆಟ್ ರಹಿತ ಪ್ರಯಾಣ: 7.56 ಲಕ್ಷ ರೂ.ದಂಡ ವಸೂಲಿ

Update: 2019-07-17 17:20 GMT

ಬೆಂಗಳೂರು, ಜು. 16: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಕೆಎಸ್ಸಾರ್ಟಿಸಿ) ಬಸ್ಸುಗಳಲ್ಲಿ ಟಿಕೆಟ್ ರಹಿತ ಪ್ರಯಾಣಿಸುತ್ತಿದ್ದ 5827 ಮಂದಿ ಪ್ರಯಾಣಿಕರನ್ನು ಪತ್ತೆ ಮಾಡಿದ್ದು, ಅವರಿಂದ ಒಟ್ಟು 7.56 ಲಕ್ಷ ರೂ.ಮೊತ್ತದ ದಂಡ ವಸೂಲಿ ಮಾಡಲಾಗಿದೆ.

ಜೂನ್ ತಿಂಗಳಲ್ಲಿ ಸಂಸ್ಥೆಯ 42,469 ವಾಹನಗಳನ್ನು ತನಿಖೆಗೊಳಪಡಿಸಿ 4673 ಪ್ರಕರಣಗಳನ್ನು ಪತ್ತೆ ಹಚ್ಚಿ, 5827 ಟಿಕೆಟ್ ರಹಿತ ಪ್ರಯಾಣಿಕರಿಂದ 7,56,661ರೂ. ದಂಡದ ರೂಪದಲ್ಲಿ ವಸೂಲಿ ಮಾಡಿದ್ದು, ಅಲ್ಲದೆ, ನಿಗಮದ ಆದಾಯದಲ್ಲಿ ಸೋರಿಕೆ ಆಗುತ್ತಿದ್ದ 99,570ರೂ.ಪತ್ತೆ ಹಚ್ಚಲಾಗಿದೆ.

ತಪ್ಪಿತಸ್ಥರ ವಿರುದ್ದ ಇಲಾಖಾ ರೀತ್ಯಾ ಸೂಕ್ತ ಶಿಸ್ತಿನ ಕ್ರಮವನ್ನು ಜರುಗಿಸಲಾಗಿದೆ. ಸಾರ್ವಜನಿಕ ಪ್ರಯಾಣಿಕರು, ಸಂಸ್ಥೆ ಬಸ್ಸುಗಳಲ್ಲಿ ಪ್ರಯಾಣಿಸುವಾಗ ಸರಿಯಾದ ಟಿಕೆಟ್/ಪಾಸ್ ಪಡೆದು ಪ್ರಯಾಣಿಸುವಂತೆ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News