ಸಾಲಬಾಧೆ: ವಿಷ ಸೇವಿಸಿ ರೈತ ಆತ್ಮಹತ್ಯೆ

Update: 2019-07-18 05:37 GMT

ವಿಜಯಪುರ, ಜು.8: ಸಾಲಬಾಧೆ ತಾಳಲಾರದೆ ರೈತನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಸಿಂಧಗಿ ತಾಲೂಕಿನ ಚಾಂದಕವಟೆ ಗ್ರಾಮದಲ್ಲಿ ನಡೆದಿದೆ.
ಚಾಂದಕವಟೆ ನಿವಾಸಿ ಶಿವಯೋಗಿ ಬಿರಾದಾರ್(45) ಆತ್ಮಹತ್ಯೆ ಮಾಡಿಕೊಂಡ ರೈತ. ಇವರು ತನ್ನ ಜಮೀನಿನಲ್ಲೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದರೆನ್ನಲಾಗಿದೆ.
5.29 ಎಕರೆ ಜಮೀನು ಹೊಂದಿರುವ ಇವರು ಕೃಷಿಗಾಗಿ ಗ್ರಾಮೀಣ ಬ್ಯಾಂಕಿನಲ್ಲಿ 2 ಲಕ್ಷ ರೂ. ಹಾಗೂ 5 ಲಕ್ಷ ರೂ. ಕೈಸಾಲ ಮಾಡಿದ್ದರೆನ್ನಲಾಗಿದೆ. ಆದರೆ ಮಳೆ ಇಲ್ಲದೆ ಬೆಳೆ ಕೈಕೊಟ್ಟಿತ್ತು. ಈ ಹಿನ್ನೆಲೆಯಲ್ಲಿ ಸಾಲದ ಹೊರೆ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಿದ್ದರೆನ್ನಲಾಗಿದೆ.
ಈ ಬಗ್ಗೆ ಸಿಂಧಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News