ವಿಧಾನ ಮಂಡಲ ಕಲಾಪ ಆರಂಭ

Update: 2019-07-18 06:10 GMT

ಬೆಂಗಳೂರು, ಜು.18: ವಿಧಾನಮಂಡಲ ಕಲಾಪ ಆರಂಭಗೊಂಡಿದ್ದು, ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು ವಿಶ್ವಾಸ ಮತಯಾಚನೆ ಪ್ರಸ್ತಾಪವನ್ನು ಮಂಡಿಸಿದ್ದಾರೆ.

ಈ ನಡುವೆ ವಿಪಕ್ಷ ನಾಯಕ ಬಿ.ಎಸ್.ಯಡಿಯೂರಪ್ಪ ಮಾತನಾಡಿ, ಈ ಹಿಂದೆ ನಡೆದ ಹಲವು ವಿಶ್ವಾಸ ಮತಯಾಚನೆ ಪ್ರಸಂಗವನ್ನು ಪ್ರಸ್ತಾಪಿಸಿ, ಆದಷ್ಟು ಬೇಗ ಪ್ರಕ್ರಿಯೆಯನ್ನು ಮುಗಿಸುವಂತೆ ಸ್ಪೀಕರ್ ಅವರನ್ನು ಮನವಿ ಮಾಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ಯಡಿಯೂರಪ್ಪ ತುಂಬಾ ಅವಸರದಲ್ಲಿದ್ದಾರೆ ಎಂದು ವ್ಯಂಗ್ಯವಾಡಿದರು. ಭಿನ್ನಮತೀಯ ಶಾಸಕರು ತಾವು ಸ್ವ ಇಚ್ಛೆಯಿಂದ ರಾಜೀನಾಮೆ ನೀಡುತ್ತಿರುವುದಾಗಿ ತಮಗೆ ಸಲ್ಲಿಸಿದ ರಾಜೀನಾಮೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಆದರೆ ಅವರು ಸುಪ್ರೀಂ ಕೋಟ್‌ನಲ್ಲಿ ಹೋಗಿ ಬೇರೆಯದ್ದೇ ಮಾತನಾಡಿದ್ದಾರೆ. ನನ್ನ ಮೇಲೆ ಆರೋಪಗಳ ಸುರಿ ಮಳೆ ಮಾಡಿದ್ದಾರೆ ಎಂದು ಕುಮಾರಸ್ವಾಮಿ ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News