ಸುಪ್ರೀಂ ಕೋರ್ಟ್ ಆದೇಶದಿಂದ ನನ್ನ ವಿಪ್ ಅಧಿಕಾರಕ್ಕೆ ಚ್ಯುತಿ: ಸಿದ್ದರಾಮಯ್ಯ

Update: 2019-07-18 08:08 GMT

ಬೆಂಗಳೂರು, ಜು.18: ಶಾಸಕಾಂಗ ಪಕ್ಷದ ನಾಯಕನಿಗೆ ವಿಪ್ ನೀಡಲು ಅವಕಾಶವಿಲ್ಲ ಎಂದು ನ್ಯಾಯಾಲಯದ ತೀರ್ಪಿನಲ್ಲಿ ಉಲ್ಲೇಖಿಸಲಾಗಿದೆ. ಸುಪ್ರೀಂ ಕೋರ್ಟ್ ನೀಡಿರುವ ಈ ತೀರ್ಪಿನಿಂದ ನನ್ನ ವಿಪ್ ಅಧಿಕಾರಕ್ಕೆ ಚ್ಯುತಿ ಉಂಟಾಗಿದೆ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ವಿಶ್ವಾಸ ಮತಯಾಚನೆಯ ಪ್ರಸ್ತಾಪದ ಬಳಿಕ ಮುಖ್ಯಮಂತ್ರಿ ಕುಮಾರಸ್ವಾಮಿ ಭಾಷಣದ ವೇಳೆ ಮಧ್ಯೆ ಸದನದಲ್ಲಿ ಕ್ರಿಯಾ ಲೋಪವೆತ್ತಿ ಸಿದ್ದರಾಮಯ್ಯ ಮಾತನಾಡಿದರು.

ಪಕ್ಷಾಂತರ ನಿಷೇಧಿಸುವ 10ನೇ ಶೆಡ್ಯೂಲ್  ಸಂವಿಧಾನದಲ್ಲಿ ಇನ್ನೂ ಅಸ್ತಿತ್ವದಲ್ಲಿದೆ. ಆದರೆ ಶಾಸಕಾಂಗ ಪಕ್ಷದ ನಾಯಕನಿಗೆ ವಿಪ್ ನೀಡಲು ಅವಕಾಶವಿಲ್ಲ ಎಂದು ಸುಪ್ರೀಂ ಕೋರ್ಟ್  ನೀಡಿರುವ ಆದೇಶ ನನ್ನ ಹಕ್ಕಿನ ಚ್ಯುತಿಯಾಗಿದೆ ಎಂದರು.
ಶಾಸಕರು ಸಾಮೂಹಿಕವಾಗಿ ರಾಜೀನಾಮೆ ನೀಡಿತ್ತಿರುವುದು ಒಂದು ಕುಟಿಲ ತಂತ್ರ ಎಂದು ಸಿದ್ದರಾಮಯ್ಯ ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News