ಸಾಂಕ್ರಾಮಿಕ ರೋಗಗಳ ಹಾವಳಿ: ನಿರ್ಲಕ್ಷಕ್ಕೆ ಸಿಪಿಎಂ ಖಂಡನೆ

Update: 2019-07-18 12:38 GMT

 ಮಂಗಳೂರು, ಜು.18: ದ.ಕ.ಜಿಲ್ಲೆಯಲ್ಲಿ ಅದರಲ್ಲೂ ಮಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಡೆಂಗ್, ಮಲೇರಿಯಾ ಸಹಿತ ಸಾಂಕ್ರಾಮಿಕ ರೋಗಬಾಧೆಯ ಪ್ರಕರಣಗಳು ಹೆಚ್ಚುತ್ತಿದ್ದು, ಜಿಲ್ಲಾಧಿಕಾರಿಯು ಆರೋಗ್ಯ ಇಲಾಖಾಧಿಕಾರಿಗಳ ತುರ್ತು ಸಭೆ ಕರೆದು ರೋಗ ನಿಯಂತ್ರಿಸಲು ಸೂಕ್ತ ಕ್ರಮ ಜರುಗಿಸಲು ಮುಂದಾಗಿದ್ದಾರೆ. ಆದರೆ, ಜಿಲ್ಲೆಯ ಶಾಸಕರು ಈ ಬಗ್ಗೆ ನಿರ್ಲಕ್ಷ ವಹಿಸುತ್ತಿಲ್ಲ ಎಂದು ಸಿಪಿಎಂ ದ.ಕ. ಜಿಲ್ಲಾ ಸಮಿತಿ ಖಂಡಿಸಿದೆ.

ಸಾಂಕ್ರಾಮಿಕ ರೋಗಗಳ ನಿಯಂತ್ರಣವು ಕೇವಲ ಆರೋಗ್ಯ ಇಲಾಖೆ ಅಧಿಕಾರಿಗಳ ಜವಾಬ್ದಾರಿ ಅಲ್ಲ. ಜನರಿಂದ ಆಯ್ಕೆಯಾದ ಶಾಸಕರ ಸಹಿತ ಇತರ ಜನಪ್ರತಿನಿಧಿಗಳ ಪಾತ್ರವೂ ಇದೆ. ಮಂಗಳೂರು ಮಹಾನಗರ ಪಾಲಿಕೆಯ ಆಡಳಿತ ಮಂಡಳಿಯ ಅವಧಿ ಮುಗಿದು ವಾರ್ಡುಗಳಿಗೆ ಜನಪ್ರತಿನಿಧಿಗಳಿಲ್ಲವಾಗಿದೆ. ಶಾಸಕರು ಈ ಬಗ್ಗೆ ಕಾಳಜಿ ತೋರದೆ ಬೆಂಗಳೂರಿನಲ್ಲಿ ನಡೆಯುತ್ತಿರುವ ಅಧಿಕಾರ ರಾಜಕಾರಣದ ಆಟದಲ್ಲಿ ತೊಡಗಿ, ರೆಸಾರ್ಟುಗಳಲ್ಲಿ ಕ್ರಿಕೆಟ್, ಆರ್ಕೆಸ್ಟ್ರಾದಲ್ಲಿ ಮೈಮರೆತಿದ್ದಾರೆ. ಇದು ನಾಚಿಕೆಗೇಡಿನ ಸಂಗತಿಯಾಗಿದೆ ಎಂದು ಸಿಪಿಎಂ ಜಿಲ್ಲಾ ಕಾರ್ಯದರ್ಶಿ ವಸಂತ ಆಚಾರಿ ಆಗ್ರಹಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News