ಉಡುಪಿ: ಜಾನಪದ ತರಬೇತಿಗೆ ಅರ್ಜಿ ಆಹ್ವಾನ

Update: 2019-07-18 15:21 GMT

ಉಡುಪಿ, ಜು.18:ಕರ್ನಾಟಕ ಜಾನಪದ ಅಕಾಡೆಮಿ ವತಿಯಿಂದ 2018-19ನೇ ಸಾಲಿನಲ್ಲಿ ವಿಶೇಷ ಘಟಕ ಯೋಜನೆಯಡಿ, ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿಯಲ್ಲಿ ಪರಿಶಿಷ್ಟ ಪಂಗಡದ ಶಿಬಿರಾರ್ಥಿಗಳಿಗೆ ಜಾನಪದ ಗಾಯನ, ತಮಟೆ ವಾದನ, ಕೋಲಾಟ, ಸೋಬಾನೆ ಪದ, ತತ್ವಪದ, ತಂಬೂರಿ ಪದ ಕಲಿಕಾ ತರಬೇತಿ ಶಿಬಿರದಲ್ಲಿ ಜಾನಪದ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿರುವ ಮೂಲ ಗುರುಗಳಿಂದ ತರಬೇತಿ ಪಡೆಯಲು ಆಸಕ್ತ ಅಭ್ಯರ್ಥಿ ಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

18ರಿಂದ 35 ವರ್ಷದೊಳಗಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅ್ಯರ್ಥಿಗಳಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದೆ. ಅರ್ಜಿಯನ್ನು ರಿಜಿಸ್ಟ್ರಾರ್, ಕರ್ನಾಟಕ ಜಾನಪದ ಅಕಾಡೆಮಿ, ಬೆಂಗಳೂರು ಹಾಗೂ ಜಿಲ್ಲಾ ಸಹಾಯಕ ನಿರ್ದೇಶಕರ ಕಾರ್ಯಾಲಯದಿಂದ ಪಡೆಯಬಹುದು.

ಅರ್ಜಿ ಗಳನ್ನು ಸಲ್ಲಿಸುವವರು ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ, ಆರ್‌ಡಿ ಸಂಖ್ಯೆಯುಳ್ಳ ಜಾತಿ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಆದಾಯ ಪ್ರಮಾಣ ಪತ್ರ ಮತ್ತು ಪಡಿತರ ಚೀಟಿಯ ನಕಲು ಪ್ರತಿಯೊಂದಿಗೆ ಜು.30ರ ಒಳಗೆ ಅರ್ಜಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗೆ ಕರ್ನಾಟಕ ಜಾನಪದ ಅಕಾಡೆಮಿ, ಬೆಂಗಳೂರು ದೂರವಾಣಿ ಸಂಖ್ಯೆ: 080-22215509 ಇವರನ್ನು ಸಂಪರ್ಕಿಸುವಂತೆ ಕರ್ನಾಟಕ ಜಾನಪದ ಅಕಾಡೆಮಿಯ ರಿಜಿಸ್ಟ್ರಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News