ಅಲಂಗಾರು: ಬಸ್ ಢಿಕ್ಕಿ-ನಿವೃತ್ತ ಶಿಕ್ಷಕ ಮೃತ್ಯು

Update: 2019-07-18 15:25 GMT

ಮೂಡುಬಿದಿರೆ: ರಸ್ತೆ ದಾಟುತ್ತಿದ್ದ ವೇಳೆ  ಬಸ್ ಢಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ನಿವೃತ್ತ ಶಿಕ್ಷಕ ಆಸ್ಪತ್ರೆಗೆ ಕೊಂಡೊಯ್ಯುವ ವೇಳೆ ಮೃತಪಟ್ಟ ಘಟನೆ ಅಲಂಗಾರು ಜಂಕ್ಷನ್‍ನಲ್ಲಿ  ನಡೆದಿದೆ.

ಅಲಂಗಾರು ಸಮೀಪದ ಕಾನದ ನಿವಾಸಿ, ನಿವೃತ್ತ ಶಿಕ್ಷಕ ಕೃಷ್ಣ ಭಟ್ (81) ಮೃತರು ಎಂದು ಗುರುತಿಸಲಾಗಿದೆ. ಅವರು ಬುಧವಾರ ಮಧ್ಯಾಹ್ನ ವೇಳೆಗೆ ಅಲಂಗಾರು ಜಂಕ್ಷನ್‍ನಲ್ಲಿ ರಾಷ್ಟ್ರೀಯ ಹೆದ್ದಾರಿ ದಾಟುತ್ತಿದ್ದ ವೇಳೆ, ಕಾರ್ಕಳ ಕಡೆಯಿಂದ ಮೂಡುಬಿದಿರೆ ಕಡೆಗೆ ಬರುತ್ತಿದ್ದ  ಬಸ್ ಢಿಕ್ಕಿ ಹೊಡೆದಿದೆ. ತೀವ್ರವಾಗಿ ಗಾಯಗೊಂಡ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕೊಂಡೊಯ್ಯುವ ವೇಳೆ ಮೃತಪಟ್ಟಿದ್ದಾರೆ.

ಕೃಷ್ಣ ಭಟ್ ಅವರು ಅಜೆಕಾರು, ಸಾಗರ, ಕಾನದಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು. ಅವರಿಗೆ ಪತ್ನಿ, ಇಬ್ಬರು ಪುತ್ರರು, ಇಬ್ಬರು ಪುತ್ರಿಯರು ಇದ್ದಾರೆ.

ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News