ಕುಲಭೂಷಣ್ ವಿಷಯದಲ್ಲಿ ಕಾನೂನು ಪ್ರಕಾರ ಕ್ರಮ: ಪಾಕ್ ಪ್ರಧಾನಿ ಇಮ್ರಾನ್ ಖಾನ್

Update: 2019-07-18 15:31 GMT

ಇಸ್ಲಾಮಾಬಾದ್, ಜು. 18: ಭಾರತೀಯ ಪ್ರಜೆ ಕುಲಭೂಷಣ್ ಜಾಧವ್ ಪ್ರಕರಣದಲ್ಲಿ ಪಾಕಿಸ್ತಾನವು ಕಾನೂನು ಪ್ರಕಾರ ಮುನ್ನಡೆಯುವುದು ಎಂದು ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಗುರುವಾರ ಹೇಳಿದ್ದಾರೆ.

ಭಾರತೀಯ ನೌಕಾಪಡೆಯ ಮಾಜಿ ಅಧಿಕಾರಿ ಜಾಧವ್‌ಗೆ ಪಾಕಿಸ್ತಾನದ ಸೇನಾ ನ್ಯಾಯಾಲಯವೊಂದು ನೀಡಿದ ಮರಣ ದಂಡನೆಯನ್ನು ಪಾಕಿಸ್ತಾನವು ಮರುಪರಿಶೀಲನೆ ನಡೆಸಬೇಕು ಎಂಬುದಾಗಿ ನೆದರ್‌ಲ್ಯಾಂಡ್ಸ್‌ನ ಹೇಗ್‌ನಲ್ಲಿರುವ ಅಂತರ್‌ರಾಷ್ಟ್ರೀಯ ನ್ಯಾಯಾಲಯವು ತೀರ್ಪು ನೀಡಿದ ಒಂದು ದಿನದ ಬಳಿಕ ಆ ದೇಶದ ಪ್ರಧಾನಿ ಈ ಹೇಳಿಕೆ ನೀಡಿದ್ದಾರೆ.

‘‘ಕುಲಭೂಷಣ್ ಜಾಧವ್‌ರನ್ನು ದೋಷಮುಕ್ತಗೊಳಿಸಿ ಬಿಡುಗಡೆ ಮಾಡಿ ಭಾರತಕ್ಕೆ ವಾಪಸ್ ಕಳುಹಿಸಿಕೊಡಿ ಎಂಬುದಾಗಿ ಹೇಳದಿರುವುದಕ್ಕೆ ಅಂತರ್‌ರಾಷ್ಟ್ರೀಯ ನ್ಯಾಯಾಲಯಕ್ಕೆ ಧನ್ಯವಾದ ಸಲ್ಲಿಸುತ್ತೇನೆ’’ ಎಂದು ಇಮ್ರಾನ್ ಖಾನ್ ಹೇಳಿದರು. ಭಾರತದ ನಿವೃತ್ತ ನೌಕಾಪಡೆ ಅಧಿಕಾರಿ ಪಾಕಿಸ್ತಾನದ ಜನತೆಯ ವಿರುದ್ಧ ಅಪರಾಧಗಳನ್ನು ಮಾಡಿದ್ದಾರೆ ಎಂದು ಅವರು ನುಡಿದರು.

ಜಾಧವ್‌ರನ್ನು ಗಲ್ಲಿಗೇರಿಸಬಾರದು ಹಾಗೂ ಅವರು ದೋಷಿ ಎಂಬುದಾಗಿ ಸೇನಾ ನ್ಯಾಯಾಲಯವೊಂದು ನೀಡಿರುವ ತೀರ್ಪು ಮತ್ತು ಮರಣ ದಂಡನೆಯನ್ನು ಮರುಪರಿಶೀಲಿಸಬೇಕು ಎಂಬುದಾಗಿ ಜಾಗತಿಕ ನ್ಯಾಯಾಲಯವು ಬುಧವಾರ ನೀಡಿದ ತೀರ್ಪಿನಲ್ಲಿ ಪಾಕಿಸ್ತಾನಕ್ಕೆ ಆದೇಶ ನೀಡಿರುವುದನ್ನು ಸ್ಮರಿಸಬಹುದಾಗಿದೆ.

49 ವರ್ಷದ ಜಾಧವ್‌ರನ್ನು ಪಾಕಿಸ್ತಾನದ ಭದ್ರತಾ ಸಂಸ್ಥೆಗಳು 2016 ಮಾರ್ಚ್ 3ರಂದು ಇರಾನ್‌ನಿಂದ ಅಪಹರಿಸಿ ಪಾಕಿಸ್ತಾನಕ್ಕೆ ಕರೆದುಕೊಂಡು ಹೋಗಿದ್ದವು. ಇರಾನ್‌ನಲ್ಲಿ ಅವರು ಉದ್ಯಮ ನಡೆಸುತ್ತಿದ್ದರು.

ಬೇಹುಗಾರಿಕೆ ಮತ್ತು ಭಯೋತ್ಪಾದನೆ ಆರೋಪದಲ್ಲಿ ಜಾಧವ್‌ರನ್ನು ಬಂಧಿಸಿರುವುದಾಗಿ ಪಾಕಿಸ್ತಾನ ಹೇಳಿಕೊಂಡಿದೆ.ಕುಲಭೂಷಣ್ ವಿಷಯದಲ್ಲಿ ಕಾನೂನು ಪ್ರಕಾರ ಕ್ರಮ: ಪಾಕ್ ಪ್ರಧಾನಿ ಇಮ್ರಾನ್ ಖಾನ್

ಇಸ್ಲಾಮಾಬಾದ್, ಜು. 18: ಭಾರತೀಯ ಪ್ರಜೆ ಕುಲಭೂಷಣ್ ಜಾಧವ್ ಪ್ರಕರಣದಲ್ಲಿ ಪಾಕಿಸ್ತಾನವು ಕಾನೂನು ಪ್ರಕಾರ ಮುನ್ನಡೆಯುವುದು ಎಂದು ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಗುರುವಾರ ಹೇಳಿದ್ದಾರೆ.

ಭಾರತೀಯ ನೌಕಾಪಡೆಯ ಮಾಜಿ ಅಧಿಕಾರಿ ಜಾಧವ್‌ಗೆ ಪಾಕಿಸ್ತಾನದ ಸೇನಾ ನ್ಯಾಯಾಲಯವೊಂದು ನೀಡಿದ ಮರಣ ದಂಡನೆಯನ್ನು ಪಾಕಿಸ್ತಾನವು ಮರುಪರಿಶೀಲನೆ ನಡೆಸಬೇಕು ಎಂಬುದಾಗಿ ನೆದರ್‌ಲ್ಯಾಂಡ್ಸ್‌ನ ಹೇಗ್‌ನಲ್ಲಿರುವ ಅಂತರ್‌ರಾಷ್ಟ್ರೀಯ ನ್ಯಾಯಾಲಯವು ತೀರ್ಪು ನೀಡಿದ ಒಂದು ದಿನದ ಬಳಿಕ ಆ ದೇಶದ ಪ್ರಧಾನಿ ಈ ಹೇಳಿಕೆ ನೀಡಿದ್ದಾರೆ.

‘‘ಕುಲಭೂಷಣ್ ಜಾಧವ್‌ರನ್ನು ದೋಷಮುಕ್ತಗೊಳಿಸಿ ಬಿಡುಗಡೆ ಮಾಡಿ ಭಾರತಕ್ಕೆ ವಾಪಸ್ ಕಳುಹಿಸಿಕೊಡಿ ಎಂಬುದಾಗಿ ಹೇಳದಿರುವುದಕ್ಕೆ ಅಂತರ್‌ರಾಷ್ಟ್ರೀಯ ನ್ಯಾಯಾಲಯಕ್ಕೆ ಧನ್ಯವಾದ ಸಲ್ಲಿಸುತ್ತೇನೆ’’ ಎಂದು ಇಮ್ರಾನ್ ಖಾನ್ ಹೇಳಿದರು. ಭಾರತದ ನಿವೃತ್ತ ನೌಕಾಪಡೆ ಅಧಿಕಾರಿ ಪಾಕಿಸ್ತಾನದ ಜನತೆಯ ವಿರುದ್ಧ ಅಪರಾಧಗಳನ್ನು ಮಾಡಿದ್ದಾರೆ ಎಂದು ಅವರು ನುಡಿದರು.

ಜಾಧವ್‌ರನ್ನು ಗಲ್ಲಿಗೇರಿಸಬಾರದು ಹಾಗೂ ಅವರು ದೋಷಿ ಎಂಬುದಾಗಿ ಸೇನಾ ನ್ಯಾಯಾಲಯವೊಂದು ನೀಡಿರುವ ತೀರ್ಪು ಮತ್ತು ಮರಣ ದಂಡನೆಯನ್ನು ಮರುಪರಿಶೀಲಿಸಬೇಕು ಎಂಬುದಾಗಿ ಜಾಗತಿಕ ನ್ಯಾಯಾಲಯವು ಬುಧವಾರ ನೀಡಿದ ತೀರ್ಪಿನಲ್ಲಿ ಪಾಕಿಸ್ತಾನಕ್ಕೆ ಆದೇಶ ನೀಡಿರುವುದನ್ನು ಸ್ಮರಿಸಬಹುದಾಗಿದೆ.

49 ವರ್ಷದ ಜಾಧವ್‌ರನ್ನು ಪಾಕಿಸ್ತಾನದ ಭದ್ರತಾ ಸಂಸ್ಥೆಗಳು 2016 ಮಾರ್ಚ್ 3ರಂದು ಇರಾನ್‌ನಿಂದ ಅಪಹರಿಸಿ ಪಾಕಿಸ್ತಾನಕ್ಕೆ ಕರೆದುಕೊಂಡು ಹೋಗಿದ್ದವು. ಇರಾನ್‌ನಲ್ಲಿ ಅವರು ಉದ್ಯಮ ನಡೆಸುತ್ತಿದ್ದರು.

ಬೇಹುಗಾರಿಕೆ ಮತ್ತು ಭಯೋತ್ಪಾದನೆ ಆರೋಪದಲ್ಲಿ ಜಾಧವ್‌ರನ್ನು ಬಂಧಿಸಿರುವುದಾಗಿ ಪಾಕಿಸ್ತಾನ ಹೇಳಿಕೊಂಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News