×
Ad

Breaking News: ನಾಳೆ 1:30ರೊಳಗೆ ಬಹುಮತ ಸಾಬೀತುಪಡಿಸಿ: ಮುಖ್ಯಮಂತ್ರಿಗೆ ರಾಜ್ಯಪಾಲರ ಸೂಚನೆ

Update: 2019-07-18 21:14 IST
Photo: ndtv.com

ಬೆಂಗಳೂರು, ಜು.18: ಶುಕ್ರವಾರ ಮಧ್ಯಾಹ್ನ 1.30ರೊಳಗೆ ಬಹುಮತ ಸಾಬೀತುಪಡಿಸಿ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ರಾಜ್ಯಪಾಲರು ಪತ್ರದ ಮೂಲಕ ಸೂಚಿಸಿದ್ದಾರೆ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಗುರುವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪ್ರತಿಪಕ್ಷದವರು ಬಹುಮತ ಸಾಬೀತುಪಡಿಸಿ ಎಂದು ಹೇಳುವ ಮೊದಲೇ ವಿಶ್ವಾಸಮತ ಯಾಚನೆಗೆ ಸಮಯ ನಿಗದಿಪಡಿಸಿ ಎಂದು ಸ್ಪೀಕರ್ ಬಳಿ ಮನವಿ ಮಾಡಿದ್ದರು. ಈಗ ರಾಜ್ಯಪಾಲರು 15 ಜನರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರಿಂದ ವಿಳಂಬ ಮಾಡದೆ, ಶುಕ್ರವಾರ ಮಧ್ಯಾಹ್ನ 1.30ರೊಳಗೆ ಬಹುಮತ ಸಾಬೀತುಪಡಿಸಿ ಎಂದು ಎಚ್‌ಡಿಕೆಗೆ ಪತ್ರ ಬರೆಯುವ ಮೂಲಕ ಸೂಚಿಸಿದ್ದಾರೆ ಎಂದು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News