ಕಾಂಗ್ರೆಸ್ ಶಾಸಕ ಶ್ರೀಮಂತ ಪಾಟೀಲ್ ಅಪಹರಣ ಆರೋಪ: ಪ್ರಕರಣ ದಾಖಲು

Update: 2019-07-18 16:37 GMT

ಬೆಂಗಳೂರು, ಜು.18: ಕಾಂಗ್ರೆಸ್ ಶಾಸಕ ಶ್ರೀಮಂತ ಪಾಟೀಲ್ ಸದನಕ್ಕೆ ಹಾಜರಾಗದೆ ಮುಂಬೈಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಗ್ಗೆ ಕಾಂಗ್ರೆಸ್ ನಾಯಕರು ಸದನದಲ್ಲಿ ಇಂದು ಸ್ಪೀಕರ್ ಗೆ ದೂರು ನೀಡಿದ್ದ ಹಿನ್ನೆಲೆ ಅಪಹರಣ ಪ್ರಕರಣ ದಾಖಲಾಗಿದೆ.

ಕಾಂಗ್ರೆಸ್ ಶಾಸಕ ಶ್ರೀಮಂತ ಪಾಟೀಲ್ ರನ್ನು ಬಿಜೆಪಿಯವರು ಅಪಹರಿಸಿದ್ದಾರೆಂದು ಆರೋಪಿಸಿ ಸದನದಲ್ಲಿ ಕಾಂಗ್ರೆಸ್ ನಾಯಕರು ಹಲವು ಫೋಟೋಗಳನ್ನು ಪ್ರದರ್ಶಿಸಿದ್ದರು. ಅಲ್ಲದೇ, ಮಾಜಿ ಸಿಎಂ ಸಿದ್ದರಾಮಯ್ಯ ಅವರು ಈ ಬಗ್ಗೆ ಸ್ಪೀಕರ್ ಗೆ ದೂರು ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ವಿಧಾನಸೌಧ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಬೆಂಗಳೂರು ಪೊಲೀಸ್ ಆಯುಕ್ತರ ಸೂಚನೆ ಮೇರೆಗೆ ದೂರು ದಾಖಲಾಗಿದೆ.

ಸಿದ್ದರಾಮಯ್ಯ ನೀಡಿದ ದೂರನ್ನು ಪರಿಶೀಲಿಸಿದ ಸ್ಪೀಕರ್ ರಮೇಶ್ ಕುಮಾರ್ ದೂರನ್ನು ಗೃಹ ಇಲಾಖೆಗೆ ಸಲ್ಲಿಸಿದ್ದರು. ಗೃಹ ಇಲಾಖೆಯು ದೂರನ್ನು ಡಿಜಿ-ಐಜಿಪಿಗೆ ರವಾನಿಸಲಾಗಿತ್ತು. ಡಿಜಿ-ಐಜಿಪಿಯಿಂದ ಬೆಂಗಳೂರು ಪೊಲೀಸ್ ಆಯುಕ್ತರಿಗೆ ದೂರು ದಾಖಲಿಸಲು ಸೂಚನೆ ನೀಡಲಾಗಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News