ಪಾಕ್: ಭ್ರಷ್ಟಾಚಾರ ಆರೋಪದಲ್ಲಿ ಮಾಜಿ ಪ್ರಧಾನಿ ಅಬ್ಬಾಸಿ ಬಂಧನ

Update: 2019-07-18 16:31 GMT

ಲಾಹೋರ್, ಜು. 18: ಪಾಕಿಸ್ತಾನದ ಭ್ರಷ್ಟಾಚಾರ ನಿಗ್ರಹ ಸಂಸ್ಥೆಯು ಗುರುವಾರ ಮಾಜಿ ಪ್ರಧಾನಿ ಶಾಹಿದ್ ಖಾಕನ್ ಅಬ್ಬಾಸಿಯನ್ನು ಬಂಧಿಸಿದೆ.

ದ್ರವೀಕೃತ ನೈಸರ್ಗಿಕ ಅನಿಲ (ಎಲ್‌ಎನ್‌ಜಿ) ಟರ್ಮಿನಲ್ ಯೋಜನೆಗೆ ಸಂಬಂಧಿಸಿ ಕಳೆದ ವರ್ಷ ದಾಖಲಿಸಲಾದ ಪ್ರಕರಣದಲ್ಲಿ ಅಬ್ಬಾಸಿಯನ್ನು ಬಂಧಿಸಲಾಗಿದೆ ಎಂದು ನ್ಯಾಶನಲ್ ಅಕೌಂಟಬಿಲಿಟಿ ಬ್ಯೂರೋ ಹೇಳಿಕೆಯೊಂದರಲ್ಲಿ ತಿಳಿಸಿದೆ.

ಲಾಹೋರ್‌ನಲ್ಲಿ ಪತ್ರಿಕಾಗೋಷ್ಠಿಯೊಂದರಲ್ಲಿ ಮಾತನಾಡಲು ತೆರಳುತ್ತಿದ್ದಾಗ ಅಬ್ಬಾಸಿಯನ್ನು ಬಂಧಿಸಲಾಗಿದೆ.

ಬಂಧನಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿರುವ ಪ್ರತಿಪಕ್ಷಗಳು, ತನ್ನ ವಿರೋಧಿಗಳ ಬಾಯಿಮುಚ್ಚಿಸಲು ಸರಕಾರ ಪ್ರಯತ್ನಿಸುತ್ತಿದೆ ಎಂದು ಆರೋಪಿಸಿವೆ. ಅಧಿಕಾರದ ದುರ್ಬಳಕೆಯನ್ನು ವಿರೋಧಿಸಿ ಮುಂದಿನ ವಾರ ಒಂದು ದಿನದ ಪ್ರತಿಭಟನೆ ನಡೆಸಲಾಗುವುದು ಎಂದು ಅವು ಎಚ್ಚರಿಸಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News