ಹೆದರಾಬಾದ್ ಕ್ರಿಕೆಟ್ ಸಂಸ್ಥೆಯ ಚುನಾವಣೆ ಸ್ಪರ್ಧೆಗೆ ಅಝರುದ್ದೀನ್ ನಿರ್ಧಾರ

Update: 2019-07-19 05:07 GMT

ಹೈದರಾಬಾದ್, ಜು.18: ಭಾರತದ ಮಾಜಿ ನಾಯಕ ಮುಹಮ್ಮದ್ ಅಝರುದ್ದೀನ್ ಹೈದರಾಬಾದ್ ಕ್ರಿಕೆಟ್ ಸಂಸ್ಥೆ(ಎಚ್‌ಸಿಎ)ಅಧ್ಯಕ್ಷ ಹುದ್ದೆಯ ಚುನಾವಣೆಗೆ ಸ್ಪರ್ಧಿಸಲಿದ್ದೇನೆ ಎಂದು ಹೇಳಿದ್ದಾರೆ.

ಎಚ್‌ಸಿಎನ ವಾರ್ಷಿಕ ಮಹಾಸಭೆ(ಎಜಿಎಂ)ಜು.21 ರಂದು ನಡೆಯಲಿದೆ. ಸಭೆಯಲ್ಲಿ ಚುನಾವಣೆಯ ವಿಚಾರ ಚರ್ಚೆಯಾಗುವ ಸಾಧ್ಯತೆಯಿದೆ.

‘‘ಹೌದು, ನಾನು ಎಚ್‌ಸಿಎ ಅಧ್ಯಕ್ಷ ಹುದ್ದೆಗೆ ಸ್ಪರ್ಧಿಸುತ್ತೇನೆ’’ ಎಂದು ಪಿಟಿಐಗೆ ಅಝರುದ್ದೀನ್ ತಿಳಿಸಿದ್ದಾರೆ.

  ಅಝರ್ ಭಾರತದ ಪರ 99 ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ. ಒಂದು ಹಂತದಲ್ಲಿ ಏಕದಿನ ಕ್ರಿಕೆಟ್‌ನಲ್ಲಿ ಗರಿಷ್ಠ ರನ್ ಗಳಿಸಿದ ದಾಖಲೆಯನ್ನು ನಿರ್ಮಿಸಿದ್ದರು. ಸಚಿನ್ ತೆಂಡುಲ್ಕರ್ ಈ ದಾಖಲೆಯನ್ನು ಮುರಿದಿದ್ದರು. ಭಾರತವನ್ನು 47 ಟೆಸ್ಟ್ ಪಂದ್ಯಗಳಲ್ಲಿ ನಾಯಕನಾಗಿ ಮುನ್ನಡೆಸಿದ್ದರು. ಮೂರು ವಿಶ್ವಕಪ್ ಟೂರ್ನಿಗಳಲ್ಲಿ ಭಾರತವನ್ನು ನಾಯಕನಾಗಿ ಮುನ್ನಡೆಸಿದ ಭಾರತದ ಏಕೈಕ ನಾಯಕ ಅಝರ್. 1996ರ ವಿಶ್ವಕಪ್‌ನಲ್ಲಿ ಸೆಮಿ ಫೈನಲ್‌ಗೆ ತಲುಪಿದ್ದು ನಾಯಕನಾಗಿ ಅವರ ಉತ್ತಮ ಸಾಧನೆ. 1987ರ ವಿಶ್ವಕಪ್‌ನಲ್ಲಿ ಭಾರತ ಸೆಮಿ ಫೈನಲ್ ತಲುಪಿದ್ದಾಗ ತಂಡದಲ್ಲಿದ್ದರು. 1985ರ ಚಾಂಪಿಯನ್ಸ್ ಆಫ್ ಚಾಂಪಿಯನ್ಸ್ ಸಿರೀಸ್‌ನ ಗೆಲುವಿನ ಅಭಿಯಾನದಲ್ಲಿ ಅಝರ್ ಇದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News