ದ.ಕ. ಜಿಲ್ಲೆಯಲ್ಲಿ ಭಾರೀ ಮಳೆ : ಜು.20ರಂದು ಶಾಲಾ-ಕಾಲೇಜುಗಳಿಗೆ ರಜೆ

Update: 2019-07-19 09:02 GMT

ಮಂಗಳೂರು, ಜು.19: ಭಾರತೀಯ ಹವಾಮಾನ ಇಲಾಖೆ ಹೊರಡಿಸಿರುವ ಮುನ್ಸೂಚನೆಯಂತೆ ಕರ್ನಾಟಕ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯ ಹಿನ್ನೆಲೆಯಲ್ಲಿ ದ.ಕ. ಜಿಲ್ಲೆಯ ಸರಕಾರಿ, ಅನುದಾನಿತ ಹಾಗೂ ಖಾಸಗಿಯ ಎಲ್ಲಾ ಶಾಲಾ ಕಾಲೇಜುಗಳಿಗೆ (ಪದವಿ ಪೂರ್ವ ತರಗತಿವರೆಗೆ) ಜು.20ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಆದೇಶ ಹೊರಡಿಸಿದ್ದಾರೆ.

ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ ತೀರ, ಸಮುದ್ರ ತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಎಚ್ಚರಿಕೆ ವಹಿಸುವಂತೆ ಆದೇಶದಲ್ಲಿ ತಿಳಿಸಿರುವ ಜಿಲ್ಲಾಧಿಕಾರಿ, ಮೀನುಗಾರರಿಗೆ ಕಡ್ಡಾಯವಾಗಿ ಮೀನುಗಾರಿಕೆಗೆ ಸಮುದ್ರಕ್ಕೆ ಇಳಿದಯಂತೆ ಸೂಚಿಸಿದ್ದಾರೆ.

ಜಿಲ್ಲಾ ಮಟ್ಟದ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿರಬೇಕು. ಪ್ರವಾಸಿಗರು ಹಾಗೂ ಸಾರ್ವಜನಿಕರು ಸಮುದ್ರ ತೀರಕ್ಕೆ ತೆರಳದಂತೆ ಎಚ್ಚರಿಕೆ ವಹಿಸಬೇಕು. ಪ್ರಾಕೃತಿಕ ವಿಕೋಪ ಸಂಬಂಧಿಸಿದ ಯಾವುದೇ ಸಮಸ್ಯೆಗಳಿಗೆ 1077 ಉಚಿತ ತುರ್ತು ಸೇವೆ ಸಂಖ್ಯೆಗೆ ಕರೆ ಮಾಡುವಂತೆ, ವಾಟ್ಸಾಪ್ ಸಂಖ್ಯೆ 9483908000 ಸಂಪರ್ಕಿಸುವಂತೆ ಸೂಚಿಸಿದ್ದಾರೆ.

ಜಿಲ್ಲೆಯಲ್ಲಿ ತೀವ್ರ ಮಳೆಯ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿರುವ ಕಂಟ್ರೋಲ್ ರೂಂನಲ್ಲಿ ಸಾರ್ವಜನಿಕ ದೂರುಗಳಿಗೆ ಸ್ಪಂದಿಸಲಾಗುತ್ತಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News