​ಜು.21: ಪಿಲಿಕುಳದ ಮತ್ಯೋತ್ಸವ, ಕ್ಷೇತ್ರೋತ್ಸವ

Update: 2019-07-19 10:56 GMT

ಮಂಗಳೂರು, ಜು.19: ರಾಜ್ಯ ಮೀನುಗಾರಿಕಾ ಇಲಾಖೆ, ಮೀನುಗಾರಿಕಾ ಅಭಿವೃದ್ಧಿ ನಿಗಮ ಮತ್ತು ಪಿಲಿಕುಳ ನಿಸರ್ಗಧಾಮದ ಆಶ್ರಯದಲ್ಲಿ ಡಾ.ಶಿವರಾಮ ಕಾರಂತ ಪಿಲಿಕುಳ ನಿಸರ್ಗಧಾಮದ ಲೇಕ್ ಗಾರ್ಡನ್‌ನಲ್ಲಿ ಜು.21ರಂದು ಪಿಲಿಕುಳ ಮತ್ಯೋತ್ಸವ ಮತ್ತು ಕ್ಷೇತ್ರೋತ್ಸವ ಕಾರ್ಯಕ್ರಮವು ನಡೆಯಲಿದೆ.

ಈ ಸಂದರ್ಭ ಕೆರೆಯಲ್ಲಿ ಮೀನು ಮರಿಗಳನ್ನು ಬಿಡುವ ಕಾರ್ಯಕ್ರಮವೂ ನಡೆಯಲಿದೆ.ಉತ್ಸವದ ಅಂಗವಾಗಿ ಪಿಲಿಕುಳದ ಲೇಕ್ ಗಾರ್ಡನ್‌ನ ಕೆರೆಯಲ್ಲಿ ಬೆಳೆಸಿದ ಕಾಟ್ಲಾ, ರೋಹು, ಸಾಮಾನ್ಯ ಗೆಂಡೆ ಹಾಗೂ ಇತರೆ ಮೀನುಗಳನ್ನು ಹಿಡಿದು ಮುಗಿಯುವ ತನಕ ಸಾರ್ವಜನಿಕ ಹರಾಜು ಮಾಡಲಾಗುವುದು. ನಿಗಮದಿಂದ ಸಿಹಿ ನೀರಿನ ಮೀನುಗಳು, ಪಾಂಪ್ಲೆಟ್, ಅಂಜಲ್, ಬಂಗುಡೆ, ಸಿಗಡಿ, ಬೊಂಡಾಸು ಹಾಗೂ ಇನ್ನಿತರ ತಾಜಾ ಮೀನು ಮತ್ತು ಮೌಲ್ಯವರ್ಧಿತ ಮೀನು ಉತ್ಪನ್ನಗಳ ಮಾರಾಟದ ವ್ಯವಸ್ಥೆ ಮಾಡಲಾಗಿದೆ. ಅದೇ ರೀತಿ ತಾಜಾ ಸಮುದ್ರ ಮೀನುಗಳ ಫ್ರೈ, ಫಿಶ್ ಮಸಾಲಾ, ಫಿಶ್ ಕಬಾಬ್ ಹಾಗೂ ಇನ್ನಿತರ ಮೀನಿನ ಖಾದ್ಯಗಳನ್ನು ಶುಚಿ ರುಚಿಯಾಗಿ ಸ್ಥಳದಲ್ಲೇ ತಯಾರಿಸಿ ಮಾರಾಟ ಮಾಡಲಾಗುವುದು.

ವಿವಿಧ ರೀತಿಯ ಮೀನುಮರಿಗಳ ಮತ್ತು ಒಣ ಮೀನುಗಳ ಪ್ರದರ್ಶನ ಮತ್ತು ಮಾರಾಟ ಹಾಗೂ ಅಲಂಕಾರಿಕಾ ಮೀನುಗಳ ಪ್ರದರ್ಶನ ಮತ್ತು ಮಾರಾಟ ಕೂಡಾ ಇದೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News