ರಾಜ್ಯಪಾಲರು ಬಿಜೆಪಿ ಏಜೆಂಟ್‍ರಂತೆ ವರ್ತಿತ್ತಿದ್ದಾರೆ: ಕೆಪಿಸಿಸಿ ಮಾಜಿ ಕಾರ್ಯದರ್ಶಿ ಡಿ.ಬಸವರಾಜ್

Update: 2019-07-19 12:44 GMT

ದಾವಣಗೆರೆ, ಜು.19: ಸಂವಿಧಾನ ಬದ್ದ ಅಧಿಕಾರವನ್ನು ದುರುಪಯೋಗ ಪಡಿಸಿಕೊಂಡು ರಾಜ್ಯಪಾಲರು ಬಿಜೆಪಿಯ ಏಜೆಂಟ್‍ರಂತೆ ವರ್ತನೆ ಮಾಡುತ್ತಿದ್ದಾರೆಂದು ಕೆಪಿಸಿಸಿ ಮಾಜಿ ಕಾರ್ಯದರ್ಶಿ ಡಿ.ಬಸವರಾಜ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ವಿಧಾನಸಭೆ ಅಧಿವೇಶನ ನಡೆಯುತ್ತಿರುವಾಗ ಆಡಳಿತ ಪಕ್ಷದ ನಾಯಕರಿಗೆ ಬಹುಮತ ಸಾಬೀತು ಪಡಿಸಲು ನಿರ್ದೇಶನ ನೀಡಲು ರಾಜ್ಯಪಾಲರಿಗೆ ಯಾವುದೇ ರೀತಿಯ ಅಧಿಕಾರ ಇರುವುದಿಲ್ಲ. ಬಹುಮತ ಸಾಬೀತುಪಡಿಸಲು ಮುಖ್ಯಮಂತ್ರಿ ಕುಮಾರಸ್ವಾಮಿಯವರಿಗೆ ಆದೇಶಿಸಿರುವುದು ಸಂವಿಧಾನ ವಿರೋಧಿ ಕ್ರಮ. ಇದು ಭಾರತದ ಒಕ್ಕೂಟ ವ್ಯವಸ್ಥೆಗೆ ಧಕ್ಕೆ ತರಲಿದೆ. ಸದನ ನಡೆಯುತ್ತಿರುವಾಗ ಎಲ್ಲಾ ನಿರ್ಧಾರಗಳನ್ನು ಸ್ಪೀಕರ್ ಮಾತ್ರ ತೆಗೆದುಕೊಳ್ಳಲು ಸಾಧ್ಯ. ಸುಪ್ರೀಂಕೋರ್ಟ್‍ಗೆ ಇಲ್ಲದ ಅಧಿಕಾರ ರಾಜ್ಯಪಾಲರಿಗೆ ನೀಡಿದವರಾರು ಎಂದು ಪ್ರಶ್ನಿಸಿದರು.

ರಾಜ್ಯಪಾಲರ ತೀರ್ಮಾನ ಪ್ರಜಾಪ್ರಭುತ್ವ ಮತ್ತು ಸಂವಿಧಾನ ವಿರೋಧಿಯಾಗಿದೆ. ರಾಜ್ಯಪಾಲರು ತಮ್ಮ ಸ್ಥಾನದ ಘನತೆ ಗೌರವ ಮರೆತು ಸಂಘ ಪರಿವಾರದ ಸದಸ್ಯನಂತೆ ಬಿಜೆಪಿ ಪರ ವಹಿಸಿರುವುದು ಸರಿಯಲ್ಲ. ರಾಜ್ಯಪಾಲರ ಆದೇಶ ಧಿಕ್ಕರಿಸಿ ಸದನದಲ್ಲಿ ಸುದೀರ್ಘ ಚರ್ಚೆಗೆ ಅವಕಾಶ ನೀಡಬೇಕೆಂದು ಸ್ಪೀಕರವರಲ್ಲಿ ಅವರು ಮನವಿ ಮಾಡಿದ್ದಾರೆ. ಶಾಸಕರಿಗೆ ವಿಪ್ ನೀಡುವ ಅಧಿಕಾರ ಆಯಾ ಪಕ್ಷದ ಶಾಸಕಾಂಗ ನಾಯಕರಿಗೆ ನೀಡಬೇಕೆಂದು ಒತ್ತಾಯಿಸಿದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News