ಜು.21: ಉಡುಪಿ ಮಹಿಳಾ ಕಾಂಗ್ರೆಸ್‌ನಿಂದ ಆಟಿಡೊಂಜಿ ದಿನ ಕಾರ್ಯಕ್ರಮ

Update: 2019-07-19 16:28 GMT

ಉಡುಪಿ, ಜು.19: ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಹಾಗೂ ಉಡುಪಿ ಬ್ಲಾಕ್ ಮಹಿಳಾ ಕಾಂಗ್ರೆಸ್‌ನ ಜಂಟಿ ಆಶ್ರಯದಲ್ಲಿ ‘ಆಟಿಡೊಂಜಿ ದಿನ’ ಕಾರ್ಯಕ್ರಮ ಉಡುಪಿ ಕಾಂಗ್ರೆಸ್ ಭವನದಲ್ಲಿ ಜು.21ರ ರವಿವಾರ ನಡೆಯಲಿದೆ.

ಅಂದು ಬೆಳಗ್ಗೆ 11:00 ಗಂಟೆಗೆ ಉದ್ಘಾಟನೆಗೊಳ್ಳುವ ಈ ಕಾರ್ಯಕ್ರಮ ಅಪರಾಹ್ನದ ಸಹಭೋಜನದೊಂದಿಗೆ ಮುಕ್ತಾಯಗೊಳ್ಳಲಿದೆ. ಆಟಿಯ ವಿವಿಧ ವಿಶೇಷ ಖಾದ್ಯಗಳನ್ನು ಕಾಂಗ್ರೆಸ್‌ನ ಮಹಿಳಾ ಕಾರ್ಯಕರ್ತೆಯರು ತಯಾರಿಸ ಲಿದ್ದಾರೆ. ಆಷಾಡದ ಮಹತ್ವದ ಕುರಿತಂತೆ ಮಾಹಿತಿ ನೀಡಲಾಗುವುದು. ಪಕ್ಷದ ನಾಯಕರು ಹಾಗೂ ಕಾರ್ಯಕರ್ತರು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು ಎಂದು ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತಾ ವಾಗ್ಳೆ ಹಾಗೂ ಉಡುಪಿ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಚಂದ್ರಿಕಾ ಶೆಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News