ಶಿಕ್ಷಕರ ವರ್ಗಾವಣೆ: ಕರಡು ಪಟ್ಟಿ ಪ್ರಕಟ
Update: 2019-07-19 22:09 IST
ಉಡುಪಿ, ಜು.19: 2018-19ನೇ ಸಾಲಿನ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ವರ್ಗಾವಣೆಗೆ ಸಂಬಂದಿಸಿದಂತೆ, ಕೋರಿಕೆ ವರ್ಗಾವಣೆಯಲ್ಲಿ ಅರ್ಜಿ ಸಲ್ಲಿಸಿರುವ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ಕರಡು ಅಂಗೀಕೃತ ಹಾಗೂ ಕರಡು ತಿರಸ್ಕೃತ ಪಟ್ಟಿಯನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಯ ಪ್ರಕಟಣಾ ಫಲಕದಲ್ಲಿ ಜು.19ರಂದು ಪ್ರಕಟಿಸಲಾಗಿದೆ.
ಸಂಬಂಧಿತ ಶಿಕ್ಷಕರು ಹಾಗೂ ಶಿಕ್ಷಕರ ಸಂಘದ ಪದಾಧಿಕಾರಿಗಳು ಇದನ್ನು ಗಮನಿಸುವಂತೆ ತಿಳಿಸಲಾಗಿದೆ. ಈ ಕರಡು ಪಟ್ಟಿಗೆ ಅಂತಿಮವಾಗಿ ಆಕ್ಷೇಪಣೆ ಹಾಗೂಪೂರಕ ಅಗತ್ಯ ದಾಖಲೆಗಳನ್ನು ಖುದ್ದಾಗಿ ಸಂಬಂಧಿಸಿದ ಅರ್ಜಿದಾರರು ಜು.23ರೊಳಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಆಯಾಯ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಿ ಮಾಹಿತಿ ಪಡೆಯುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಶೇಷಶಯನ ಕಾರಿಂಜ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.