ವಾಣಿಜ್ಯ ಪರೀಕ್ಷೆ: ನಿಷೇಧಾಜ್ಞೆ

Update: 2019-07-19 16:40 GMT

ಉಡುಪಿ, ಜು.19: 2019ರ ವಾಣಿಜ್ಯ ಪರೀಕ್ಷೆಗಳು ಜು.22ರಿಂದ ಆ.3 ರವರೆಗೆ ಉಡುಪಿ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯಲ್ಲಿ ನಡೆಯಲಿದ್ದು, ಪರೀಕ್ಷೆಗಳು ಶಾಂತಿಯುತ ಹಾಗೂ ದೋಷರಹಿತವಾಗಿ ನಡೆಸಲು ಮತ್ತು ಎಲ್ಲಾ ರೀತಿಯ ಅವ್ಯವಹಾರಗಳನ್ನು ತಡೆಗಟ್ಟಲು ನಿಗಡಿಪಡಿಸಿದ ಪರೀಕ್ಷಾ ಕೇಂದ್ರದ 200 ಮೀ. ವ್ಯಾಪ್ತಿ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಪೋಷಿಸಿ, ಸೆಕ್ಷನ್ 144(1) ರಂತೆ ನಿಷೇಧಾಜ್ಞೆ ಜಾರಿಗೊಳಿಸಿ, ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಆದೇಶ ಹೊರಡಿಸಿದ್ದಾರೆ.

ಈ ನಿಷೇಧಾಜ್ಞೆ ಆದೇಶವು ಪರೀಕ್ಷೆ ನಡೆಯುವ ದಿನಗಳಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಜಾರಿಯಲ್ಲಿರುತ್ತದೆ ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News