ತೆಂಕನಿಡಿಯೂರು ಕಾಲೇಜಿನಲ್ಲಿ ಇತಿಹಾಸ ಎಂ.ಎ. ಉದ್ಘಾಟನೆ

Update: 2019-07-19 16:44 GMT

ಉಡುಪಿ, ಜು.19: ತೆಂಕನಿಡಿಯೂರಿನ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಇತಿಹಾಸ ಸ್ನಾತಕೋತ್ತರ ಅಧ್ಯಯನ ತರಗತಿ ಜು.17ರಂದು ಉದ್ಘಾಟನೆಗೊಂಡಿತು.

ಉಡುಪಿ ಜಿಲ್ಲಾ ಪಂಚಾಯತ್ ಸದಸ್ಯ ಹಾಗೂ ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ಜನಾರ್ದನ ತೋನ್ಸೆ ತರಗತಿಯನ್ನು ಉದ್ಘಾಟಿಸಿ ಶುಭ ಹಾರೈಸಿದರು. ಶಿರ್ವ ಸೈಂಟ್ ಮೆರೀಸ್ ಕಾಲೇಜಿನ ಪ್ರಾಂಶುಪಾಲ ಪ್ರೊ.ರಾಜನ್ ಮಾತನಾಡಿ ಸ್ನಾತಕೋತ್ತರ ವಿದ್ಯಾರ್ಥಿಗಳು ಸತತ ಅಧ್ಯಯನಶೀಲರಾದರೆ ಯಶಸ್ಸು ಸಾಧ್ಯ ಎಂದರು.

ಕಾಲೇಜಿನ ಪ್ರಾಂಶುಪಾಲ ಪ್ರೊ.ಬಾಲಕೃಷ್ಣ ಎಸ್. ಹೆಗ್ಡೆ ಅಧ್ಯಕ್ಷತೆ ವಹಿಸಿದ್ದರು. ಉಡುಪಿ ಪೂರ್ಣಪ್ರಜ್ಞ ಕಾಲೇಜಿನ ನಿಕಟಪೂರ್ವ ಪ್ರಾಂಶುಪಾಲ ಡಾ. ಜಗದೀಶ ಶೆಟ್ಟಿ ಹೊಸ ಎಂ.ಎ. ಕೋಸಿಗೆರ್ ಉತ್ತಮ ಭವಿಷ್ಯ ಹಾರೈಸಿದರು.

ಕಾಲೇಜಿನ ಐಕ್ಯೂಎಸಿ ಸಂಚಾಲಕ ಡಾ. ಸುರೇಶ್ ರೈ ಪ್ರಾಸ್ತಾವಿಕವಾಗಿ ಮಾತನಾಡಿದರು. ಅರ್ಥಶಾಸ್ತ್ರ ವಿಭಾಗ ಮುಖ್ಯಸ್ಥ ಡಾ. ಗೋಪಾಲಕೃಷ್ಣ ಎಂ. ಗಾಂವ್ಕರ್ ಸ್ವಾಗತಿಸಿದರು. ಆಂಗ್ಲಬಾಷಾ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಶರ್ಮಿಳಾ ಹಾರಾಡಿ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News