125 ರೈಲು ನಿಲ್ದಾಣಗಳಲ್ಲಿ ವೈ-ಫೈ ಸೇವೆ

Update: 2019-07-19 17:26 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ಜು.19: ರಾಜ್ಯಾದ್ಯಂತ ಡಿಜಿಟಲ್ ಇಂಡಿಯಾ ಕನಸು ಸಾಕಾರಗೊಳಿಸುವ ಸಲುವಾಗಿ ನೈರುತ್ಯ ವಲಯದಲ್ಲಿನ 125 ಪ್ರಮುಖ ರೈಲು ನಿಲ್ದಾಣಗಳಲ್ಲಿ ವೈ-ಫೈ ಸೌಲಭ್ಯ ಕಲ್ಪಿಸಲು ನೈರುತ್ಯ ರೈಲ್ವೆ ಮುಂದಾಗಿದೆ.

ನೈರುತ್ಯ ರೈಲ್ವೆ ವ್ಯಾಪ್ತಿಯಲ್ಲಿ ಒಟ್ಟು 370 ರೈಲು ನಿಲ್ದಾಣಗಳಿದ್ದು, 2016-18 ರ ಅವಧಿಯಲ್ಲಿ ಕೈಗೊಂಡ ಮೊದಲ ಹಂತದ ಯೋಜನೆಯಲ್ಲಿ 153 ನಿಲ್ದಾಣಗಳಿಗೆ ಈ ಸೌಲಭ್ಯ ಕಲ್ಪಿಸಲಾಗಿದೆ. ಎರಡನೆ ಹಂತದಲ್ಲಿ ಉಳಿದ ನಿಲ್ದಾಣಗಳಿಗೆ ವೈ-ಫೈ ಸೌಲಭ್ಯ ಕಲ್ಪಿಸಲು ಯೋಜನೆ ರೂಪಿಸಲಾಗಿದೆ.

ಬೆಂಗಳೂರು ವಿಭಾಗದ 58, ಮೈಸೂರು ವಿಭಾಗದ 55, ಹುಬ್ಬಳ್ಳಿ ವಿಭಾಗದ 40 ನಿಲ್ದಾಣಗಳಲ್ಲಿ ಸೌಲಭ್ಯ ಕಲ್ಪಿಸಲಾಗುತ್ತಿದೆ. ಮಡಿಕೇರಿ ಹೊರತುಪಡಿಸಿ ಉಳಿದ ಎಲ್ಲ ಜಿಲ್ಲಾ ಕೇಂದ್ರಗಳು, 2-ಟೈರ್ ನಗರಗಳಲ್ಲಿ ಹಾಗೂ ಪ್ರಮುಖ ತಾಲೂಕು ಕೇಂದ್ರಗಳಲ್ಲಿ ವೈ-ಫೈ ಕಲ್ಪಿಸುವ ಗುರಿ ಹೊಂದಲಾಗಿದೆ. ಸಮುದಾಯದ ಸಹಭಾಗಿತ್ವದಲ್ಲಿ ಈ ಕಾರ್ಯ ನಡೆಯಲಿದೆ ಎಂದು ಇಲಾಖೆ ತಿಳಿಸಿದೆ.

ರೈಲು ನಿಲ್ದಾಣಗಳಲ್ಲಿ ವೈ-ಫೈ ಸೌಲಭ್ಯ ಕಲ್ಪಿಸುವ ಕಾರ್ಯಕ್ಕೆ ರೈಲ್ವೆ ಖಾತೆ ಸಚಿವ ಸುರೇಶ್ ಅಂಗಡಿ ವಿಶೇಷ ಮುತುವರ್ಜಿ ವಹಿಸಿದ್ದು, ಇದರ ಮೇಲೆ ನಿಗಾ ವಹಿಸಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News