ಮುಳ್ಳಯ್ಯನಗಿರಿ ಬೆಟ್ಟದಲ್ಲಿ ರಸ್ತೆ ಅಗಲೀಕರಣ: ಶೀಘ್ರ ಕ್ರಮ ಕೈಗೊಳ್ಳಲು ಸರಕಾರಕ್ಕೆ ಹೈಕೋರ್ಟ್ ನಿರ್ದೇಶ

Update: 2019-07-19 17:34 GMT

ಬೆಂಗಳೂರು, ಜು.19: ಚಿಕ್ಕಮಗಳೂರು ಜಿಲ್ಲೆಯ ಮುಳ್ಳಯ್ಯನಗಿರಿ ಬೆಟ್ಟದ ವ್ಯಾಪ್ತಿಯ ರಸ್ತೆ ಅಗಲೀಕರಣಕ್ಕೆ ತಡೆ ಕೋರಿ ಸಲ್ಲಿಸಿದ್ದ ಅರ್ಜಿ ಸಂಬಂಧ ಹೈಕೋರ್ಟ್ ರಾಜ್ಯ ಸರಕಾರಕ್ಕೆ ಶೀಘ್ರವೇ ಕ್ರಮ ಕೈಗೊಳ್ಳಲು ನಿರ್ದೇಶಿಸಿದೆ. ಈ ಕುರಿತು ಭದ್ರಾ ವನ್ಯಜೀವಿ ಸಂರಕ್ಷಣಾ ಟ್ರಸ್ಟ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ಮತ್ತು ನ್ಯಾಯಮೂರ್ತಿ ಎಚ್.ಟಿ.ನರೇಂದ್ರಪ್ರಸಾದ್ ಅವರಿದ್ದ ವಿಭಾಗೀಯ ನ್ಯಾಯಪೀಠದಲ್ಲಿ ನಡೆಯಿತು.

ಅರ್ಜಿದಾರರ ಪರ ವಾದಿಸಿದ ವಕೀಲರು, ರಸ್ತೆ ಅಗಲೀಕರಣದಿಂದ ಮುಳ್ಳಯ್ಯನಗಿರಿ ಬೆಟ್ಟದ ಸ್ವರೂಪ ಹಾಳಾಗುತ್ತದೆ. ಪರಿಸರದ ಮೇಲೂ ಪರಿಣಾಮ ಬೀರುತ್ತದೆ. ಹೀಗಾಗಿ, ರಸ್ತೆ ಅಗಲೀಕರಣಕ್ಕೆ ತಡೆ ನೀಡಬೇಕೆಂದು ಪೀಠಕ್ಕೆ ಮನವಿ ಮಾಡಿದರು. ವಕೀಲರ ವಾದ ಆಲಿಸಿದ ನ್ಯಾಯಪೀಠವು ಸರಕಾರಕ್ಕೆ ಶೀಘ್ರವೇ ಕ್ರಮ ಕೈಗೊಳ್ಳಲು ನಿರ್ದೇಶಿಸಿ, ಅರ್ಜಿಯನ್ನು ಇತ್ಯರ್ಥಪಡಿಸಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News