ಸಿಎಂ ಕುಮಾರಸ್ವಾಮಿ ವಿಚಾರಣೆಗೆ ಕೋರ್ಟ್ ಆದೇಶ

Update: 2019-07-20 12:29 GMT

ಬೆಂಗಳೂರು, ಜು.20: ಬನಶಂಕರಿ ಬಡಾವಣೆಯಲ್ಲಿ ಸುಮಾರು 4ಎಕರೆ ಜಮೀನು ಡಿನೋಟಿಫೈ ಮಾಡಿದ್ದಾರೆನ್ನಲಾದ ಪ್ರಕರಣದಲ್ಲಿ ಜನಪ್ರತಿನಿಧಿಗಳ ಕೋರ್ಟ್ ಮುಖ್ಯಮಂತ್ರಿ ಕುಮಾರಸ್ವಾಮಿ ಸೇರಿದಂತೆ 19 ಮಂದಿ ಆರೋಪಿಗಳನ್ನು ವಿಚಾರಣೆಗೆ ಒಳಪಡಿಸುವಂತೆ ಆದೇಶಿಸಿದೆ.

ಎಚ್.ಡಿ.ಕುಮಾರಸ್ವಾಮಿ 2006-07ರಲ್ಲಿ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಬನಶಂಕರಿ ಬಡಾವಣೆಯ 4ಎಕರೆ ಜಮೀನನ್ನು ಡಿನೋಟಿಫೈ ಮಾಡಿದ್ದಾರೆಂದು ಆರೋಪಿಸಿ ಸಾಮಾಜಿಕ ಕಾರ್ಯಕರ್ತ ಎಂ.ಎಸ್.ಮಹದೇವ ಸ್ವಾಮಿ ಜನಪ್ರತಿನಿಧಿ ಕೋರ್ಟ್‌ಗೆ ದೂರು ಸಲ್ಲಿಸಿದ್ದರು.

ಪ್ರಕರಣ ಕುರಿತು ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ಕೋರ್ಟ್‌ನ ನ್ಯಾಯಾಧೀಶ ರಾಮಚಂದ್ರ ಡಿ.ಹುದ್ದಾರ, ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸೇರಿದಂತೆ 19ಮಂದಿ ಆರೋಪಿಗಳ ವಿರುದ್ಧ ವಿಚಾರಣೆಗೆ ಒಳಪಡಿಸುವಂತೆ ಆದೇಶಿಸಿದ್ದಾರೆ. ಇದೇ ವೇಳೆ ಬನಶಂಕರಿ ಬಡಾವಣೆಯ ಡಿನೋಟಿಫೈ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದ ಬಿ ರಿಪೋರ್ಟ್‌ನ್ನು ಜನಪ್ರತಿನಿಧಿಗಳ ಕೋರ್ಟ್ ವಜಾಗೊಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News