ಹಳೆಯ ಟೈರ್‌ನಲ್ಲಿ ನೀರು: 5,000 ರೂ. ದಂಡ ವಿಧಿಸಿದ ಮನಪಾ

Update: 2019-07-20 14:53 GMT

ಮಂಗಳೂರು, ಜು.20: ಡೆಂಗ್ ಸೇರಿದಂತೆ ಸಾಂಕ್ರಾಮಿಕ ರೋಗ ಹರಡುವ ಜೀವಿಗಳಿಗೆ ಆಸ್ಪದ ನೀಡುವ ಅಂಗಡಿ, ಮನೆ, ನಿರ್ಮಾಣ ಹಂತದ ಕಟ್ಟಡಗಳ ವಿರುದ್ಧ ಕಾರ್ಯಾಚರಣೆ ನಡೆಸುತ್ತಿರುವ ಮಹಾನಗರಪಾಲಿಕೆ ಅಧಿಕಾರಿಗಳು, ಶನಿವಾರ ಹಳೇ ಟೈರ್‌ಗಳಲ್ಲಿ ನೀರು ನಿಂತು ರೋಗಕ್ಕೆ ಆಹ್ವಾನ ನೀಡುತ್ತಿದ್ದ ವ್ಯಕ್ತಿಗೆ 5,000 ರೂ. ದಂಡ ವಿಧಿಸಿದ್ದಾರೆ.

ಕಣ್ಣೂರು ಕೆಫೆಕಾರ್ಟ್ ಸಂಸ್ಥೆಯ ಮಾಲಕ ನಿಶಾನ್‌ ಚಂದ್ರ ಎಂಬವರು ತನ್ನ ಆವರಣದಲ್ಲಿ ಹಳೆಯ ಟೈರ್‌ಗಳನ್ನು ಇಟ್ಟಿದ್ದು, ಇದರಲ್ಲಿ ನೀರು ನಿಂತು ಸಾಂಕ್ರಾಮಿಕ ರೋಗ ಹರಡುವ ಸೊಳ್ಳೆಗಳ ಉತ್ಪತ್ತಿಯಾಗುತ್ತಿದ್ದವು. ಸ್ಥಳಕ್ಕೆ ಭೇಟಿ ನೀಡಿದ ಮಹಾನಗರಪಾಲಿಕೆ ಅಧಿಕಾರಿಗಳು ವ್ಯಕ್ತಿಗೆ 5,000 ರೂ. ದಂಡ ವಿಧಿಸಿ, ಎಚ್ಚರಿಕೆ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News