ಮಂಗಳೂರು: ಫೇಸ್‌ಬುಕ್‌ನಲ್ಲಿ ಕಾರಿನ ಜಾಹೀರಾತು ನಂಬಿ ಲಕ್ಷ ರೂ. ಕಳೆದುಕೊಂಡ ವ್ಯಕ್ತಿ

Update: 2019-07-20 15:05 GMT

ಮಂಗಳೂರು, ಜು.20: ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಕಾರು ಮಾರಾಟಕ್ಕೆ ಇರುವ ಬಗ್ಗೆ ಜಾಹೀರಾತು ನೀಡಿ ವ್ಯಕ್ತಿಯೋರ್ವರಿಗೆ ಲಕ್ಷಾಂತರ ರೂ. ಮೋಸ ಮಾಡಿದ ಬಗ್ಗೆ ಸೈಬರ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಫೇಸ್‌ಬುಕ್‌ನಲ್ಲಿ ಕಾರು ಮಾರಾಟಕ್ಕಿದೆ ಎಂದು ಜಾಹೀರಾತು ಕಾಣಿಸಿಕೊಂಡಿದೆ. ಇದನ್ನು ನೋಡಿದ ಸ್ಥಳೀಯ ವ್ಯಕ್ತಿಯೋರ್ವರು, ಕಾರನ್ನು ಕೊಂಡುಕೊಳ್ಳುವ ಬಗ್ಗೆ ಮರು ಸಂದೇಶ ಕಳುಹಿಸಿದ್ದರು. ಜೂ.20ರಂದು ಮೀನಾಕ್ಷಿದಾಸ್ ಎಂದು ಹೇಳಿಕೊಂಡಂತಹ ವ್ಯಕ್ತಿ ಕರೆ ಮಾಡಿ, ತಾನು ಸಿಐಎಸ್‌ಎಫ್‌ನ ಸಿಬ್ಬಂದಿ. ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೆಲಸ ಮಾಡಿಕೊಂಡಿರುವುದಾಗಿ ಪರಿಚಯಿಸಿಕೊಂಡಿದ್ದಾನೆ.
ತನಗೆ ಕಾಶ್ಮೀರಕ್ಕೆ ವರ್ಗಾವಣೆಗಿದ್ದು, ಆಲ್ಟೊ 800 ಕಾರನ್ನು ಮಾರಾಟ ಮಾಡುವುದಾಗಿ ತಿಳಿಸಿ, ಗುರುತಿನ ಚೀಟಿ, ಕಾರ್ ಆರ್‌ಡಿಯನ್ನು ವಾಟ್ಸ್‌ಆ್ಯಪ್ ಮೂಲಕ ಕಳುಹಿಸಿದ್ದಾರೆ. ಅದನ್ನು ನಂಬಿದ ಸ್ಥಳೀಯ ವ್ಯಕ್ತಿ ಅವರಿಗೆ ಆನ್‌ಲೈನ್ ಪೇಮೇಂಟ್ ಮೂಲಕ ಹಂತ ಹಂತವಾಗಿ ಒಟ್ಟು 1,20,000 ರೂ.ನ್ನು ವರ್ಗಾವಣೆ ಮಾಡಿ ಮೋಸ ಹೋಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಕುರಿತು ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News