ಬೆಂಗಳೂರು-ಮಂಗಳೂರು ರೈಲು ಸಂಚಾರ ರದ್ದು

Update: 2019-07-20 16:27 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ಜು.20: ಪಶ್ಚಿಮಘಟ್ಟ ಭಾಗದಲ್ಲಿ ಎಡೆಬಿಡದೆ ಮಳೆ ಸುರಿಯುತ್ತಿರುವುದರಿಂದ ಜನ ಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದ್ದರೆ, ಮತ್ತೊಂದು ಕಡೆ ಗುಡ್ಡ ಕುಸಿಯುವ ಭೀತಿಯ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ರೈಲು ಸಂಚಾರವನ್ನು ರದ್ದು ಮಾಡಲಾಗಿದೆ.

ಅತಿಯಾದ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು-ಮಂಗಳೂರು ನಡುವಿನ 86/100 ಮೈಲಿನಲ್ಲಿ ಗುಡ್ಡ ಕುಸಿಯುವ ಭೀತಿ ಇದೆ. ಆದುದರಿಂದ ಶನಿವಾರ ಹಾಗೂ ರವಿವಾರ ರೈಲು ಸಂಚಾರ ರದ್ದು ಮಾಡಲಾಗಿದೆ. ರೈಲು ಹಳಿ ತುಂಬೆಲ್ಲಾ ನೀರು ತುಂಬಿರುವುದು ಒಂದೆಡೆಯಾದರೆ, ಹಳಿ ಅಕ್ಕಪಕ್ಕದ ಗುಡ್ಡ ಯಾವಾಗ ಬೇಕಾದರೂ ಹಳಿ ಮೇಲೆ ಕುಸಿಯಬಹುದು ಎನ್ನುವ ಆತಂಕ ಎದುರಾಗಿದೆ.

ಹಳಿ ಮೇಲೆ ಮಣ್ಣು ಕುಸಿದಿರುವ ಸ್ಥಳದಲ್ಲಿ ಮತ್ತೆ ಕುಸಿಯಬಹುದಾದ ಮಣ್ಣನ್ನು ತೆರವುಗೊಳಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಈ ಮಾರ್ಗದಲ್ಲಿ ರೈಲು ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಮಳೆ ಹೀಗೇ ಮುಂದುವರಿದರೆ ಕಲ್ಲು ಬಂಡೆ ಮತ್ತು ಗುಡ್ಡ ರೈಲ್ವೆ ಹಳಿಯ ಮೇಲೆ ಜಾರುವ ಸಂಭವವಿರುವುದರಿಂದ ರೈಲ್ವೆ ಅಧಿಕಾರಿಗಳು ಮತ್ತು ಸಿಬ್ಬಂದಿ ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದು, ಈಗಲೂ ಸಣ್ಣಪುಟ್ಟ ತೆರವು ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News