ಲಾರಿ ಢಿಕ್ಕಿ: ಪಾದಾಚಾರಿ ಮೃತ್ಯು

Update: 2019-07-20 16:32 GMT

ಬೈಂದೂರು, ಜು.20: ಶಿರೂರು ನಿರ್ಗದ್ದೆಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಜು.20ರಂದು ಬೆಳಗ್ಗೆ 10.15ರ ಸುಮಾರಿಗೆ ಲಾರಿ ಢಿಕ್ಕಿ ಹೊಡೆದ ಪರಿಣಾಮ ಬಸ್ಸಿಗಾಗಿ ರಸ್ತೆ ಬದಿ ಕಾಯುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ.

ಮೃತರನ್ನು ನಿರ್ಗದ್ದೆಯ ತಿಮ್ಮಪ್ಪ ಆಚಾರಿ(85) ಎಂದು ಗುರುತಿಸಲಾಗಿದೆ. ಬೈಂದೂರು ಕಡೆಗೆ ಹೋಗಲು ನಿರ್ಗದ್ದೆ ರಸ್ತೆಯ ಡಿವೈಡರ್ ಬಳಿ ಬಸ್ಸಿಗಾಗಿ ಕಾಯುತ್ತಿದ್ದ ತಿಮ್ಮಪ್ಪ ಆಚಾರಿಗೆ ಬೈಂದೂರು ಕಡೆಯಿಂದ ಭಟ್ಕಳ ಕಡೆಗೆ ಬರುತ್ತಿದ್ದ ಲಾರಿ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ.

ಇದರಿಂದ ಗಂಭೀರವಾಗಿ ಗಾಯಗೊಂಡ ತಿಮ್ಮಪ್ಪ ಆಚಾರಿ ಬೈಂದೂರು ಸರಕಾರಿ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರು. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News