ತುಳು ಸಾಹಿತ್ಯ ಅಕಾಡೆಮಿ: ಆ.4ಕ್ಕೆ ಪ್ರಶಸ್ತಿ ಪ್ರದಾನ ಸಮಾರಂಭ

Update: 2019-07-20 17:03 GMT

ಬೆಂಗಳೂರು, ಜು.20: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ವತಿಯಿಂದ 2018 ನೇ ಸಾಲಿನ ಗೌರವ ಪ್ರಶಸ್ತಿ ಮತ್ತು ಪುಸ್ತಕ ಬಹುಮಾನ ಪ್ರದಾನ ಸಮಾರಂಭವನ್ನು ಆ.4ರಂದು ರವೀಂದ್ರ ಕಲಾ ಕ್ಷೇತ್ರದಲ್ಲಿ ಆಯೋಜಿಸಲಾಗಿದೆ ಎಂದು ಅಕಾಡೆಮಿಯ ಅಧ್ಯಕ್ಷ ಎ.ಸಿ.ಭಂಡಾರಿ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತುಳು ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆಗೈದ ಲಲಿತಾ ರೈ, ತುಳು ನಾಟಕ ಕ್ಷೇತ್ರದಲ್ಲಿ ಸಾಧನೆ ಮಾಡಿದ ರತ್ನಾಕರ್ ರಾವ್ ಕಾವೂರು, ಸಿನಿಮಾ ಕ್ಷೇತ್ರದ ಎ.ಕೆ.ವಿಜಯ್ ಹಾಗೂ 2018ನೇ ಸಾಲಿನ ಪುಸ್ತಕ ಬಹುಮಾನ ಪ್ರಶಸ್ತಿಗೆ ವಿ.ಶಾಂತರಾಮ್ ಶೆಟ್ಟಿ ಮತ್ತು ಟಿ.ರಾಜಶ್ರೀ ರೈ ಪೆರ್ಲರವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದರು.

ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಎ.ಸಿ.ಭಂಡಾರಿ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಲಿದ್ದು, ಕನ್ನಡ ಮತ್ತು ಸಂಸ್ಕತಿ ಇಲಾಖೆ ಸಚಿವ ಡಿ.ಕೆ.ಶಿವಕುಮಾರ್ ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪಮೊಯ್ಲಿ, ನಗರ ಅಭಿವೃದ್ಧಿ ಸಚಿವ ಯು.ಟಿ.ಖಾದರ್, ಸಂಸದ ತೇಜಸ್ವಿ ಸೂರ್ಯ, ಶಾಸಕ ಡಾ.ಉದಯ್ ಗರುಡಾಚಾರ್, ಕನ್ನಡ ಸಂಸ್ಕತಿ ಇಲಾಖೆ ನಿರ್ದೇಶಕಿ ಕೆ.ಎಂ.ಜಾನಕಿ ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News