ಜಾಣ ಜಾಣೆಯರ ಬಳಗಕ್ಕೆ ಅರ್ಜಿ ಆಹ್ವಾನ

Update: 2019-07-20 17:06 GMT

ಉಡುಪಿ, ಜು.20: ಕನ್ನಡ ಪುಸ್ತಕ ಪ್ರಾಧಿಕಾರವು ವಿದ್ಯಾರ್ಥಿ ಯುವಜನರನ್ನು ಸಾಹಿತ್ಯಾಭಿರುಚಿಗೆ ಆಕರ್ಷಿಸಲು ಹಾಗೂ ಸಾಹಿತ್ಯದ ಕ್ರಿಯಾಶೀಲತೆಯನ್ನು ಬೆಳೆಸಲು ಪದವಿ ಕಾಲೇಜು ಹಾಗೂ ಸ್ನಾತಕೋತ್ತರ ಕೇಂದ್ರಗಳಲ್ಲಿ ‘ಜಾಣ ಜಾಣೆಯರ ಬಳಗ’ವನ್ನು ರಚಿಸಲು ಅರ್ಜಿಗಳನ್ನು ಆಹ್ವಾನಿಸಿದೆ.

ಕನಿಷ್ಟ 5ರಿಂದ 15 ಮಂದಿ ವಿದ್ಯಾರ್ಥಿಗಳನ್ನೊಳಗೊಂಡಂತೆ ಕಾರ್ಯಕಾರಿ ಸಮಿತಿಯನ್ನು ರಚಿಸಿಕೊಂಡು, ಆಯಾ ಕಾಲೇಜುಗಳ ಪ್ರಾಂಶುಪಾಲರು ಹಾಗೂ ಕನ್ನಡ ವಿಬಾಗಗಳ ಮುಖ್ಯಸ್ಥರ ಅನುಮೋನೆಯೊಂದಿಗೆ ಅರ್ಜಿ ಸಲ್ಲಿಸ ಬಹುದಾಗಿದೆ.

ಕನಿಷ್ಟ 5ರಿಂದ 15 ಮಂದಿ ವಿದ್ಯಾರ್ಥಿಗಳನ್ನೊಳಗೊಂಡಂತೆ ಕಾರ್ಯಕಾರಿ ಸಮಿತಿಯನ್ನು ರಚಿಸಿಕೊಂಡು, ಆಯಾ ಕಾಲೇಜುಗಳ ಪ್ರಾಂಶುಪಾಲರು ಹಾಗೂ ಕನ್ನಡ ವಿಬಾಗಗಳ ಮುಖ್ಯಸ್ಥರ ಅನುಮೋದನೆಯೊಂದಿಗೆ ಅರ್ಜಿ ಸಲ್ಲಿಸ ಬಹುದಾಗಿದೆ. ಕಾಲೇಜಿನಲ್ಲಿ ಕನ್ನಡ ಸಾಹಿತ್ಯಿಕ ವಾತಾವರಣವನ್ನು ಕ್ರಿಯಾಶೀಲವಾಗಿಡುವ ನಿಟ್ಟಿನಲ್ಲಿ ವರ್ಷದಲ್ಲಿ 2 ಕಾರ್ಯಕ್ರಮಗಳಂತೆ ಕನ್ನಡ ಸಾಹಿತ್ಯ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗುತ್ತದೆ. ಇದಕ್ಕಾಗಿ ಪ್ರಾಧಿಕಾರದಿಂದ ಕಾರ್ಯಕ್ರಮ ಒಂದಕ್ಕೆ 5000 ರೂ.ಗಳ ಗರಿಷ್ಟ ಮಿತಿಯೊಳಗೆ ವಾಸ್ತವಿಕ ವೆಚ್ಚವನ್ನು ಭರಿಸಲಾಗುವುದು. ಇದಲ್ಲದೆ ಪ್ರಾಧಿಕಾರ ಹಮ್ಮಿಕೊಳ್ಳುವ ಎಲ್ಲಾ ಯೋಜನೆ ಹಾಗೂ ಕಾರ್ಯಕ್ರಮ ಗಳಲ್ಲಿ ಜಾಣ ಜಾಣೆಯರ ಬಳಗನ್ನು ತೊಡಗಿಸಿಕೊಳ್ಳಲಾಗುವುದು.

ಇದಕ್ಕಾಗಿ ಅರ್ಜಿ ಸಲ್ಲಿಸಲು ಜು.31 ಕೊನೆಯ ದಿನವಾಗಿದೆ. ನಿಗದಿತ ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಚೇರಿ ಅಥವಾ ಕನ್ನಡ ಪುಸ್ತಕ ಪ್ರಾಧಿಕಾರದ ವೆಬ್‌ಸೈಟ್:  www.kannadapustakapradhikara.com ನಲ್ಲಿ ಅರ್ಜಿಯನ್ನು ಪಡೆಯಬಹುದಾಗಿದೆ. ಭರ್ತಿ ಮಾಡಿದ ಅರ್ಜಿಗಳನ್ನು ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಬೆಂಗಳೂರು (ದೂ.ಸಂಖ್ಯೆ: 080-22107704/22484516) ಇವರಿಗೆ ಕಳುಹಿಸುವಂತೆ ಕನ್ನಡ ಪುಸ್ತಕ ಪ್ರಾಧಿಕಾರದ ಆಳಿತಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News