​ಕಾವ-ಜಾಣ-ರತ್ನ ಪರೀಕ್ಷೆ: ಅರ್ಜಿ ಆಹ್ವಾನ

Update: 2019-07-20 17:11 GMT

ಮಂಗಳೂರು, ಜು.20: ಕನ್ನಡ ಸಾಹಿತ್ಯ ಪರಿಷತ್ ನಡೆಸುವ ಕನ್ನಡ ಪ್ರವೇಶ, ಕಾವ, ಜಾಣ, ರತ್ನ ಪರೀಕ್ಷೆಗಳಿಗಾಗಿ 2019-20ನೇ ಸಾಲಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

2019ರ ಡಿಸೆಂಬರ್ ಕೊನೆಯ ವಾರದಲ್ಲಿ ನಡೆಯುವ ಈ ಪರೀಕ್ಷೆಗಳಿಗೆ ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನಾಂಕವಾಗಿದೆ.
ಆಸಕ್ತರು 25 ರೂ. ಶುಲ್ಕ ಪಾವತಿಸಿ, ಅರ್ಜಿ ಸಲ್ಲಿಸಬಹುದು. ಅಲ್ಲದೆ, ಸೆಪ್ಟಂಬರ್ 15ರವರೆಗೆ ದಂಡ ಶುಲ್ಕ 50 ರೂ.ನ್ನು ಹೆಚ್ಚುವರಿಯಾಗಿ ನೀಡಿ ಅರ್ಜಿ ಸಲ್ಲಿಸಬಹುದು.

ಪರೀಕ್ಷಾ ನಿಯಮಾವಳಿ ಹಾಗೂ ಅರ್ಜಿಯನ್ನು ಕಸಾಪ ಕಚೇರಿ, ಶ್ರೀಕೃಷ್ಣ ಸಂಕೀರ್ಣ, ಮಹಾತ್ಮಾಗಾಂಧಿ ರಸ್ತೆ, ಕೊಡಿಯಾಲ್‌ಬೈಲ್ ಮಂಗಳೂರು, ಈ ವಿಳಾಸದಿಂದ ಪಡೆಯಬಹುದು ಎಂದು ದ.ಕ. ಜಿಲ್ಲಾ ಕಸಾಪ ಅಧ್ಯಕ್ಷ ಎಸ್.ಪ್ರದೀಪಕುಮಾರ ಕಲ್ಕೂರ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News